ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬಿಜೆಪಿ ಮುಖಂಡರಿಂದ ಅಳಿಲು ಸೇವೆ

ವರದಿ: ಹೈದರ್ ಸಾಬ್, ಕುಂದಾಣ

ರಾಜ್ಯ ಸುದ್ದಿಗಳು

ದೇವನಹಳ್ಳಿ

CHETAN KENDULI

ತಾಲೂಕಿನ ವಿಶ್ವನಾಥಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಆವರಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳಿಗೆ ಜಿಲ್ಲಾ ಮತ್ತು ತಾಲೂಕು ಬಿಜೆಪಿ ವತಿಯಿಂದ ಮುಖಂಡರು ಬನ್ ಪ್ಯಾಕೇಟ್‌ಗಳನ್ನು ವಿತರಿಸಿದರು.ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಖಜಾಂಚಿ ಕೆ.ನಾಗೇಶ್ ಮಾರ್ಗದರ್ಶನದಲ್ಲಿ ಯುವ ಬಿಜೆಪಿ ಮುಖಂಡ ಶ್ರೇಯಸ್ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಬನ್ ಪ್ಯಾಕೇಟ್ ವಿತರಣಾ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎಚ್.ಎಂ.ರವಿಕುಮಾರ್ ಮಾತನಾಡಿ, ಈ ಬಾರಿ ಕೋವಿಡ್‌ನಿಂದಾಗಿ ಸಾಕಷ್ಟು ಜನರು ಸಂಕಷ್ಟದಲ್ಲಿದ್ದಾರೆ. ಅದನ್ನು ಅರಿತು ರಾಜ್ಯ ಬಿಜೆಪಿ ಎಸ್‌ಸಿಮೋರ್ಚಾ ಖಜಾಂಚಿ ಕೆ.ನಾಗೇಶ್ ಅವರು ಸಾಕಷ್ಟು ಸಮಾಜ ಸೇವೆಯನ್ನು ಮಾಡುತ್ತಾ ಬರುತ್ತಿದ್ದಾರೆ. ಈಗಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೊದಲ ದಿನದಲ್ಲಿ ದೇವನಹಳ್ಳಿ ಪಟ್ಟಣದ ಪರೀಕ್ಷಾ ಕೇಂದ್ರದಲ್ಲಿ ಬನ್ ಮತ್ತು ನೀರಿನ ಬಾಟೆಲ್‌ಗಳನ್ನು ವಿತರಿಸಿದ್ದರು. ಎರಡನೇ ದಿನದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಸಲುವಾಗಿ ಅವರ ಅನುಪಸ್ಥಿತಿಯಲ್ಲಿ ವಿಶ್ವನಾಥಪುರ ಕೆಪಿಎಸ್ ಶಾಲೆಯಲ್ಲಿ ಪರೀಕ್ಷೆ ಬರೆಯಲು ಬಂದಿರುವ ವಿದ್ಯಾರ್ಥಿಗಳಿಗೆ ಬನ್‌ಗಳನ್ನು ವಿತರಿಸಲಾಗುತ್ತಿದೆ. ಇದೇ ರೀತಿ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ವತಿಯಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯನ್ನು ಮಾಡಲಾಗಿದೆ.

ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಯನ್ನು ಉತ್ತಮವಾಗಿ ಬರೆದಿದ್ದು, ತಾಲೂಕು ಪ್ರಥಮ ಸ್ಥಾನ ಪಡೆಯುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದರು.ಈ ವೇಳೆಯಲ್ಲಿ ಜಿಲ್ಲಾ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಸಂಚಾಲಕ ಎಲ್.ಎನ್.ಅಂಬರೀಶ್, ತಾಲೂಕು ಎಸ್‌ಟಿ ಮೋರ್ಚಾ ಅಧ್ಯಕ್ಷ ಅಮರನಾಥ್, ಸೈನಿಕ ಪ್ರಕೋಷ್ಠದ ಸಂಚಾಲಕ ವೆಂಕಟೇಶ್, ತಾಲೂಕು ಉಪಾಧ್ಯಕ್ಷ ಕೆ.ಸಿ.ಮುನಿರಾಜು, ಯುವ ಮುಖಂಡ ಶ್ರೇಯಸ್, ಭೈರೇಗೌಡ ಸೇರಿದಂತೆ ಹಲವಾರು ಇದ್ದರು.

 

Be the first to comment

Leave a Reply

Your email address will not be published.


*