ರಾಜ್ಯ ಸುದ್ದಿಗಳು
ದೇವನಹಳ್ಳಿ
ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರಕಾರದ ಯೋಜನೆಗಳನ್ನು ಪ್ರತಿ ಗ್ರಾಮಗಳಿಗೆ ತೆರಳಿ ಜನರಿಗೆ ಮನದಟ್ಟು ಮಾಡಬೇಕು. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಎಚ್.ಎಂ.ರವಿಕುಮಾರ್ ತಿಳಿಸಿದರು.ದೇವನಹಳ್ಳಿ ತಾಲೂಕಿನ ಶ್ಯಾನಪ್ಪನಹಳ್ಳಿ ಗ್ರಾಮದ ರಸ್ತೆಯಲ್ಲಿ ಮುಖಂಡರೊಂದಿಗೆ ಚರ್ಚಿಸಿ ಮಾತನಾಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷಗಳು ಕಳೆಯುತ್ತಿದೆ. ಕೊರೊನಾ ಸಂದರ್ಭದಲ್ಲಿಯೂ ಸರಕಾರವನ್ನು ಉತ್ತಮವಾಗಿ ನಡೆಸಿಕೊಂಡು ಬರುತ್ತಿದೆ. ಆರೋಗ್ಯದ ಹಿತದೃಷ್ಠಿಯಿಂದ ಪ್ರತಿ ನಾಗರೀಕರಿಗೆ ಉಚಿತ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಪಕ್ಷದಲ್ಲಿ ಸಿಎಂ ಖುರ್ಚಿ ಬದಲಾವಣೆ ಬಗ್ಗೆ ವಿಪಕ್ಷಗಳಿಗೆ ಏಕೆ ಚಿಂತೆ, ಹೈಕಮಾಂಡ್ ಯಾರಿಗೆ ಸಿಎಂ ಎಂದು ಸೂಚಿಸಿರುತ್ತದೆಯೋ ಅವರ ಪರವಾಗಿ ಹಾಗೂ ಪಕ್ಷದ ಪರವಾಗಿ ಕೆಲಸ ಮಾಡಲಾಗುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಆರೋಪಗಳನ್ನು ಮಾಡುವುದನ್ನು ಬಿಟ್ಟು ಜನರ ಪರವಾಗಿ ನಿಂತು ಕೆಲಸ ಮಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕಿದೆ. ಗ್ರಾಮಗಳಲ್ಲಿ ಬಿಜೆಪಿ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಸಂಚಾಲಕ ಎಲ್.ಎನ್.ಅಂಬರೀಶ್ ಮಾತನಾಡಿ, ಪಕ್ಷ ನಮಗೆ ನೀಡಿರುವ ಜವಾಬ್ದಾರಿಯನ್ನು ಉತ್ತಮವಾಗಿ ಮಾಡಲಾಗುತ್ತಿದೆ. ಪ್ರತಿ ಜನರಿಗೆ ಪಕ್ಷದ ತತ್ವ ಸಿದ್ಧಾಂತಗಳನ್ನು ತಿಳಿಸಿಕೊಡಲಾಗುತ್ತಿದ್ದು, ಮುಂಬರುವ ಜಿಪಂ, ತಾಪಂ ಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಸಭೆಯಲ್ಲಿ ಮುಖಂಡರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಬಿಜೆಪಿ ಪಕ್ಷವು ಜನರ ಪರವಾಗಿದೆ ಎಂದರು.ಈ ವೇಳೆಯಲ್ಲಿ ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಕೆ.ಸಿ.ಮುನಿರಾಜ್, ಎಸ್‌ಟಿ ಮೋರ್ಚಾ ತಾಲೂಕು ಅಧ್ಯಕ್ಷ ಅಮರನಾಥ್, ತಾಲೂಕು ಸೈನಿಕ ಪ್ರಕೋಷ್ಠದ ಸಂಚಾಲಕ ವೆಂಕಟೇಶ್, ಯುವ ಮುಖಂಡ ಶ್ರೇಯಸ್, ಮುಖಂಡರು ಇದ್ದರು.
Be the first to comment