ಜಿಲ್ಲಾ ಸುದ್ದಿಗಳು
ಬಾಗಲಕೋಟೆ:(ಜಮಖಂಡಿ) ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆ ಆಗುತ್ತಿರುವ ಪರಿಣಾಮ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿ ಸತತ ಸುರಿಯುತ್ತಿರುವ ಮಳೆಯಿಂದಾಗಿ ಜಮಖಂಡಿ ತಾಲೂಕಿನ ಕೃಷ್ಣ ನದಿಯ ತೀರದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಕೃಷ್ಣಾ ನದಿಗೆ ಹೆಚ್ಚಿದ ಹೊರ ಹರಿವು ಹಿನ್ನಲೆ,ನದಿ ತೀರದ ಗ್ರಾಮಗಳಿಗೆ ಇಂದು ಕ್ಷೇತ್ರದ ಶಾಸಕರು ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ.
ತಾಲೂಕಿನ ಕೃಷ್ಣಾ ತೀರದ ಮುತ್ತೂರ, ತುಬಚಿ, ಶುರಪಾಲಿ, ಟಕ್ಕಳಕಿ, ಜಂಬಗಿ ಕೆ ಡಿ ಹಾಗೂ ಟಕ್ಕೋಡ ಗ್ರಾಮಗಳಿಗೆ ಭೇಟಿ ನೀಡಿ ಜನರಿಗೆ ಪ್ರವಾಹ ಭೀತಿಯ ಮುಂಜಾಗೃತಾ ಕ್ರಮವಾಗಿ ತಮ್ಮ ಜಾನುವಾರಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಜಮಖಂಡಿ ಕ್ಷೇತ್ರದ ಶಾಸಕ ಆನಂದ ನ್ಯಾಮಗೌಡ ಜನರಲ್ಲಿ ಮನವಿ ಮಾಡಿಕೊಂಡರು. ಹಾಗೆಯೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಯಿತು.
Be the first to comment