ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಭೇಟಿ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ. ಜು.24: ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಮುಧೋಳ್ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ, ಆಲಗುಂಡಿ, ಹಾನಿಯುಂಟಾಗಿದ್ದು, ಮಿರ್ಜಿ, ಬುದ್ನಿ ಬಿ.ಕೆ, ಮಾಚಕನೂರು, ಅಂತಾಪುರ ಒಂಟಿಗೋಡಿ, ಉತ್ತೂರು, ಸೇರಿದಂತೆ ವಿವಿಧ ಪ್ರದೇಶಗಳಿಗೆ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಭೇಟಿ ನೀಡಿ, ಮನೆ ಹಾನಿ, ಬೆಳೆ ಹಾನಿ, ರಸ್ತೆ, ಸೇತುವೆಗಳ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಯನ್ನು ಪರಿಶೀಲನೆ‌ ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿದರು.

ನಂತರ ಮಾತನಾಡಿದ ಅವರು, ಸಂತ್ರಸ್ತರಿಗೆ ಕೂಡಲೇ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಿ, ಆರೈಕೆ ಮಾಡಬೇಕು. ಅತಿವೃಷ್ಠಿಯಿಂದ ಸಂಭವಿಸಬಹುದಾದ ಅನಾಹುತಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಸುರಕ್ಷಿತ ಸ್ಥಳದಲ್ಲಿರುವಂತೆ ಮನವರಿಕೆ ಮಾನವರಿಕೆ ಮಾಡಬೇಕು. ರಸ್ತೆ, ಸೇತುವೆಗಳ ದುರಸ್ಥಿಯಾದ ಕಡೆ ಸಾರ್ವಜನಿಕರ ಸಂಚಾರ ನಿಷೇಧಿಸಿ ಸಂಭವಿಸಬಹುದಾದ ಅವಘಡಗಳನ್ನು ತಪ್ಪಿಸಬೇಕು. ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಕೇಂದ್ರಸ್ಥಾನ ದಲ್ಲಿದ್ದು, ಸಂತ್ರಸ್ತರಿಗೆ ನೆರವಾಗಬೇಕು. ಪರಿಹಾರ ಕಾರ್ಯ ಗಳಲ್ಲಿ ಸ್ವಯಂ ಪ್ರೇರಿತವಾಗಿ ತೊಡಗಿಕೊಳ್ಳಬೇಕು ಎಂದು ಸೂಚಿಸಿದರು.

ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ಡಾ. ರಾಜೇಂದ್ರ, ಎಸ್ ಪಿ ಶ್ರೀ ಲೋಕೇಶ್ ಜಗಲಸರ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*