ಜಿಲ್ಲಾ ಸುದ್ದಿಗಳು
ಬಾಗಲಕೋಟೆ: ಆಲಮಟ್ಟಿ, ಕೃಷ್ಣಾ , ನವಿಲು ತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ನಾರಾಯಣಪೂರ ಜಲಾಶಯ ಹಿನ್ನೀರು ಹೆಚ್ಚಾಗಿದೆ. ಕೃಷ್ಣ, ಮಲಪ್ರಭೆ ನದಿಗಳ ಸಂಗಮವಾದ ಕೂಡಲಸಂಗಮದ ಬಳಿ ಜಲರಾಶಿ ಸಂಪೂರ್ಣ ತುಂಬಿಕೊಂಡು ನದಿ ದಡದ ಜಮೀನುಗಳಿಗೆ ನುಗ್ಗಿ ಅಪಾರ ಹಾನಿ ಮಾಡಿದೆ.ನದಿ ದಡದ ಜಮೀನುಗಳಿಗೆ ನೀರು ನುಗ್ಗಿ ಕಬ್ಬು, ತೊಗರಿ, ಈರುಳ್ಳಿ ಮುಂತಾದ ಬೆಳೆಗಳಿಗೆ ಹಾನಿ ಉಂಟು ಮಾಡಿದೆ. ಕೆಲ ರೈತರ ಪಂಪ್‌ಸೆಟ್‌ಗಳು ನೀರಿನಲ್ಲಿ ಮುಳುಗಿವೆ.
ನದಿಯಲ್ಲಿ ಅಧಿಕ ಪ್ರಮಾಣದ ನೀರು ಹರಿಯುತ್ತಿರುವುದರಿಂದ ಮಂಡಳಿಯ ಅಧಿಕಾರಿಗಳು ಸಂಗಮೇಶ್ವರ ದೇವಾಲಯ ಬಳಿಯ ನದಿಯ ದಡಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ, ನದಿ ದಡದ ಪ್ರವೇಶಕ್ಕೆ ನಿಷೇಧ ಹೇರಿದ್ದಾರೆ.
ದೇವಾಲಯಕ್ಕೆ ನೀರು ನುಗ್ಗುವ ಮೊರಿಗಳನ್ನು ಶನಿವಾರ ರಾತ್ರಿಯೇ ಬಂದ್ ಮಾಡಲಾಗಿದೆ. ಕೂಡಲಸಂಗಮ, ಕೆಂಗಲ್ಲ, ಕಜಗಲ್ಲ, ವರಗೋಡದಿನ್ನಿ, ಹೂವನೂರ ಗ್ರಾಮದ ಬಳಿ ನೀರು ಇದ್ದು, ಸ್ವಲ್ಪ ಏರಿಕೆಯಾದರೂ ಈ ಗ್ರಾಮಗಳಿಗೆ ಮಲಪ್ರಭಾ ನದಿ ನೀರು ನುಗ್ಗುತ್ತದೆ.
Be the first to comment