ರಾಜ್ಯ ಸುದ್ದಿಗಳು
ಕುಮಟಾ
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ತಾಲೂಕಿನ ದೀವಗಿ ಬಳಿಯ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಪಕ್ಕದ ಗುಡ್ಡ ಕುಸಿಯಲಾರಂಭಿಸಿದೆ.ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಚತುಪ್ಪಥ ರಾಷ್ಟ್ರೀಯ ಹೆದ್ದಾರಿ ಪಕ್ಕದ ಗುಡ್ಡದ ಮಣ್ಣು ಸಡಿಗೊಂಡಿದ್ದು, ಕುಸಿಯಲಾರಂಭಿಸಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಗುತ್ತಿಗೆ ಪಡೆದ ಐಆರ್‍ಬಿ ಕಂಪೆನಿಯು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅವೈಜ್ಞಾನಿಕವಾಗಿ ಗುಡ್ಡ ಕೊರೆದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಗುಡ್ಡ ಕುಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗದಲ್ಲಿ ಮಣ್ಣು ಜಮಾಗೊಂಡಿದೆ. ತಾತ್ಕಾಲಿಕವಾಗಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಒಂದು ಭಾಗದ ರಸ್ತೆಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಶೀಘ್ರದಲ್ಲೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದ ಮಣ್ಣನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಐಆರ್‍ಬಿ ಕಂಪೆನಿಯ ಅಧಿಕಾರಿಗಳು ತಿಳಿಸಿದ್ದಾರೆ.
Be the first to comment