ರಾಜ್ಯ ಸುದ್ದಿಗಳು
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರ, ಈಗ ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯನ್ನು ಇಂದಿನ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಒಕ್ಕೊರಲಿನಿಂದ ಘೋಷಣೆ ಮಾಡಲಾಗಿದೆ. ಈ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ನೇಮಕಗೊಂಡಿದ್ದಾರೆ. ಆದ್ರೇ ಈ ಕುರಿತಂತೆ ಸಂಸದೀಯ ಮಂಡಳಿಯ ಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.ಇಂದು ಮಹತ್ವದ ಬಿಜೆಪಿ ಸಂಸದೀಯ ಮಂಡಳಿಯ ಸಭೆಯು, ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯಿತು.
ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ಕೇಂದ್ರ ಸಚಿವರಾದಂತ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿಯವರು ವೀಕ್ಷಕರಾಗಿ ನೇಮಕಗೊಂಡಿದ್ದರು. ಹೀಗೆ ವೀಕ್ಷಕರಾಗಿ ನೇಮಕಗೊಂಡಿದ್ದಂತ ಇವರ ಮುಂದಾಳತ್ವದಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಹಂಗಾಮಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಮತ್ತೆ ರಾಜ್ಯದ ಸಿಎಂ ಆಗಿ ಲಿಂಗಾಯತ ಸಮುದಾಯದ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.
Be the first to comment