ಶಾಸಕ ನಿಸರ್ಗ ನಾರಾಯಣಸ್ವಾಮಿ……

ವರದಿ ಗುರುಮೂರ್ತಿ ಬೂದಿಗೆರೆ

ಜಿಲ್ಲಾ ಸುದ್ದಿಗಳು 

ದೇವನಹಳ್ಳಿ

ಮುಖ್ಯಮಂತ್ರಿ ಸ್ಥಾನಕ್ಕೆ ವ್ಯಕ್ತಿ ಬದಲಾಗಿದ್ದರೂ ಈಗಲೂ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲಿದ್ದಾರೆ.ಯಡಿಯೂರಪ್ಪ ಅವರು ಮಾಡುತ್ತಿದ್ದ ರಾಜಕೀಯ ವ್ಯವಸಾಯವನ್ನು ಗುತ್ತಿಗೆ ರೂಪದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ನೀಡಿದಂತಾಗಿದೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿಗೆ ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಸರಿಯಾಗಿ ಅನುದಾನಗಳನ್ನು ಬಿಡುಗಡೆ ಮಾಡಲಿಲ್ಲ. ನೂತನ ಮುಖ್ಯಮಂತ್ರಿಯ ಮೇಲೆ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇನೆ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಲು ಮನವಿ ಮಾಡುತ್ತೇನೆ.

CHETANA KENDULI

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ದೇವನಹಳ್ಳಿ ಕ್ಷೇತ್ರಕ್ಕೆ ಎರಡು ಭಾರಿ ಬಂದಿದ್ದಾರೆ. ವಾಸ್ತವದ ಪರಿಸ್ಥಿತಿ ಅರಿತಿದ್ದಾರೆ. ಆದ್ದರಿಂದ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ನಾವು ಜೆಡಿಎಸ್ ಪಕ್ಷದ ಶಾಸಕರಾಗಿದ್ದರೂ ಯಡಿಯೂರಪ್ಪ ಅವರ ಮೇಲೆ ಅಪಾರ ಗೌರವ ಇಟ್ಟುಕೊಂಡು ಅಂತಹ ಅನುಭವಿ ರಾಜಕಾರಣಿಯ ಮಾರ್ಗದರ್ಶನ ಪಡೆಯುತ್ತಿದ್ದೆವು. ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ನಮಗೆ ಭರವಸೆ ಕೊಟ್ಟಿದ್ದರು. ಆದರೆ ಈಡೇರಿಸಲಿಲ್ಲ.

ಮೈತ್ರಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರ್ಕಾರದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗಾಗಿ 120 ಕೋಟಿ ರೂ.ಗಳು ಬಿಡುಗಡೆ ಮಾಡಿದ್ದರು. ಬಿಜೆಪಿ ಸರ್ಕಾರ ಬಂದಮೇಲೆ ತಡೆಹಿಡಿಯಲಾಗಿತ್ತು. ಈ ಅನುದಾನವನ್ನು ಬಿಡುಗಡೆಗೊಳಿಸಿದರೆ ತಾಲ್ಲೂಕಿನ ಸಮಗ್ರ ಅಭಿವೃದ್ದಿ ಮಾಡಲಾಗುತ್ತದೆ ಎಂದು ಹೇಳಿದರು.

Be the first to comment

Leave a Reply

Your email address will not be published.


*