ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರಿಗೆ ಸಚಿವ ಸ್ಥಾನ ನೀಡಿ: ಮಂಜುನಾಥ ಚಲವಾದಿ ಬಿಜೆಪಿ ವರಿಷ್ಠರಿಗೆ ಮನವಿ….!

ವರದಿ: ಚೇತನ ಕೆಂದೂಳಿ, ಸಂಪಾದಕರು

ರಾಜ್ಯ ಸುದ್ದಿಗಳು

CHETAN KENDULI

ಮುದ್ದೇಬಿಹಾಳ:

ತಾಲೂಕಿನಲ್ಲಿ ಯಾವುದೇ ರೀತಿಯ ಬೇಧಭಾವವಿಲ್ಲದೇ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಮುದ್ದೇಬಿಹಾಳ ಕ್ಷೇತ್ರ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರಿಗೆ ರಾಜ್ಯ ಸಚಿವ ಸಂಪುಟ ದರ್ಜೆ ಸ್ಥಾಮನ ಮಾನ ನೀಡಿದರೆ ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಹಾಗೂ ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಅನುಕೂಲಕರವಾಗುತ್ತದೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ತಾಲೂಕಾಧ್ಯಕ್ಷ ಮಂಜುನಾಥ ಚಲವಾದಿ ಮನವಿ ಮಾಡಿದ್ದಾರೆ.
ಈ ಕುರಿತು ಬಿಜೆಪಿ ಪಕ್ಷದ ಕೇಂದ್ರ ಹಾಗೂ ರಾಜ್ಯ ನಾಯಕರಲ್ಲಿ ಮನವಿ ಮಾಡಿರುವ ಅವರು, ಕಾಂಗ್ರೆಸ್ ಭದ್ರಬುನಾದಿಯಾಗಿದ್ದ ಮುದ್ದೇಬಿಹಾಳ ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವಲ್ಲಿ ಶಾಸಕ ನಡಹಳ್ಳಿ ಅವರ ಸಾಧನೆ ಅಪಾರವಾದದ್ದು. ಕಳೆದ ೩೦ ವರ್ಷದಿಂದಲೂ ಸ್ಥಳೀಯ ಬಿಜೆಪಿ ಕಾರ್ಯಕರ್ತರಿಗೆ ಸಿಗದ ಭಲ ನಡಹಳ್ಳಿ ಅವರು ಎರಡೇ ವರ್ಷದಲ್ಲಿ ನೀಡಿದಂತಾಗಿದೆ. ಶಾಸಕರದಾಗಿನಿಂದ ತಾಲೂಕಿನ ಅಭಿರುದ್ದಿಗೆ ಟೊಂಕ ಕಟ್ಟಿ ನಿಂತಿದ್ದಾರೆ. ಸಮಸ್ತ ತಾಲೂಕಿನ ಕಲ್ಯಾಣಕ್ಕಾಗಿ ಹಗಲಿರುಳು ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡಿದ್ದಾರೆ. ಪಕ್ಷ ಸಂಘಟನೆ ವಿಚಾರದಲ್ಲೂ ಎಲ್ಲ ಪದಾಧಿಕಾರಿಗಳನ್ನು ಒಟ್ಟಿಗೆ ಸೇರಿಸಿ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದಾರೆ. ಇಂತಹ ಶಾಸಕರಿಗೆ ಸಚಿವ ಸ್ಥಾನಮಾನ ದೊರೆತರೆ ರಾಜ್ಯದ ಅಭಿವೃದ್ಧಿ ಕಾರ್ಯಗಳೊಂದಿಗೆ ಬಿಜೆಪಿ ಪಕ್ಷದ ಕಾರ್ಯಕರ್ತರ ಸಂಘಟಿಸುವಲ್ಲಿಯೂ ಯಾವುದೇ ಎರಡು ಮಾತಿಲ್ಲದಂತಾಗುತ್ತದೆ.
ಕಳೆದ ಎರಡು ದಶಕಗಳಿಂದ ಸಮಾಜ ಸೇವೆಯನ್ನು ಉಸಿರಾಗಿಸಿಕೊಂಡು ಸಾಮೂಹಿಕ ವಿವಾಹ, ನೋಟಬುಕ್ ವಿತರಣೆ, ಬಸ್ ಪಾಸ್ ವಿತರಣೆ ಇನ್ನು ಹಲವಾರು ಸಮಾಜಮುಖಿ ಕೆಲಸ ಮಾಡಿದ್ದಾರೆ. ಅಲ್ಲದೇ ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಬಡವರಿಗೆ ದಿನಸಿ ಕಿಟ್, ದಿನಬಳಕೆ ವಸ್ತುಗಳ ಸಮೇತ ಜನರ ಕಷ್ಟಕ್ಕೆ ಮಿಡಿದಿದ್ದಾರೆ ಮತ್ತು ತಾಲೂಕಿನ ಅರೋಗ್ಯ ಕೇಂದ್ರಗಳ ಸ್ವತಃ ಮೇಲ್ವಿಚಾರಣೆ ಮಾಡಿ ಸಾವು ನೋವುಗಳನ್ನು ತಪ್ಪಿಸಿದ್ದಾರೆ. ಹೀಗಾಗಿ ಅವರಿಗೆ ಇನ್ನು ಹೆಚ್ಚಿನ ಶಕ್ತಿ ಬರಲು ಈ ಬಾರಿಯ ಕ್ಯಾಬಿನೆಟ್ ನಲ್ಲಿ ಸಚಿವರನ್ನಾಗಿ ಮಾಡಬೇಕು ಎಂದು ಬಿಜೆಪಿ ಪಕ್ಷದ ವರಿಷ್ಠರಿಗೆ ಅವರು ಮನವಿ ಮಾಡಿದ್ದಾರೆ.

Be the first to comment

Leave a Reply

Your email address will not be published.


*