ರಾಜ್ಯ ಸುದ್ದಿಗಳು
ಆಗಸ್ಟ್ 04: ರಾಜ್ಯದಲ್ಲಿ ಆಗಸ್ಟ್ 8ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇನ್ನುಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲೂ ಮಳೆಯಾಗಲಿದೆ.*ಇನ್ನೆರಡು ತಿಂಗಳು ವರುಣಾರ್ಭಟ:*ಮುಂಗಾರು ಋುತುವಿನ ಉತ್ತರಾರ್ಧದ ಅವಧಿಯಲ್ಲಿ ಅಂದರೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಬಹುತೇಕ ರಾಜ್ಯಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ ಎಂದು ಸೋಮವಾರವಷ್ಟೇ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿತ್ತು.
ಕರ್ನಾಟಕದಲ್ಲಿ ಎರಡು ತಿಂಗಳು ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಹಾ ನಿರ್ದೇಶಕ ಮೃಂತ್ಯುಂಜಯ ಮೊಹಾಪಾತ್ರ ವಿವರಿಸಿದ್ದರು.ಸಮುದ್ರದ ಮೇಲ್ಮೈ ತಾಪಮಾನ ಹಾಗೂ ಪೆಸಿಫಿಕ್ ಮಹಾಸಾಗರದಲ್ಲಿ ಪರಿಸ್ಥಿತಿ ಸಹಜವಾಗಿರಲಿದೆ. ಇದೇ ಸ್ಥಿತಿ ಮುಂದಿನ ಎರಡು ತಿಂಗಳು ಮುಂದುವರಿಯುವ ಸಾಧ್ಯತೆ ಇರುವುದರಿಂದ ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ವಾಡಿಕೆಯ ಅಥವಾ ಅದಕ್ಕಿಂತ ಹೆಚ್ಚಿನ ಮಳೆ ನಿರೀಕ್ಷಿಸಲಾಗಿದೆ.ಕಳೆದ 24 ಗಂಟೆ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನಗರಬಸ್ತಿಕೇರಿಯಲ್ಲಿ 76 ಮಿ.ಮೀ ಮಳೆಯಾಗಿದ್ದು, ನಿನ್ನೆ ರಾಜ್ಯದಲ್ಲಿ ಅತೀ ಹೆಚ್ಚು ಮಳೆಯಾಗಿರುವ ಪ್ರದೇಶವೆಂದು ಗುರುತಿಸಿಕೊಂಡಿದೆ.ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ನಿನ್ನೆ ಸಾಧಾರಣ ಮಳೆಯಾಗಿದೆ. ಸುಮಾರು ಒಂದುವಾರದಿಂದ ವಿರಾಮ ನೀಡಿದ್ದ ಮಳೆ ಮರು ಪ್ರವೇಶಿಸಿದ್ದು, ಬೆಂಗಳೂರಿನಲ್ಲಿ ಇಂದು ಕೂಡಾ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಹಾಗೂ ಕೆಲವೆಡೆ ಉತ್ತಮ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾದರೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ.ರಾಜ್ಯದ ಮಲೆನಾಡು ಭಾಗವಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆ ಸುರಿಯಬಹುದು ಎಂದು ಅಂದಾಜಿಸಲಾಗಿದೆ. ಜೂನ್ ತಿಂಗಳಲ್ಲಿ ಕೆಲ ದಿನಗಳ ಮಟ್ಟಿಗೆ ಬಿಡುವು ನೀಡಿದ್ದ ಮಳೆ ಜುಲೈನಲ್ಲಿ ಬಾಕಿ ಪಾಲನ್ನೆಲ್ಲಾ ಸುರಿಸಿ ಹೋಗಿದ್ದು, ಈಗ ಆಶ್ಲೇಷ ಮಳೆಯೂ ಜೋರಾದರೆ ಗತಿ ಏನು ಎಂಬ ಆತಂಕ ಎದುರಾಗಿದೆ.
ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗಲಿದೆ. ಇತ್ತ ಉತ್ತರ ಒಳನಾಡಿನಲ್ಲೂ ಸಾಧಾರಣ ಮಳೆಯಾಗಲಿದ್ದು, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆ ಇದೆ.ಮೇ ತಿಂಗಳಿನಿಂದಲೇ ಮಳೆಗಾಲದ ವಾತಾವರಣವಿದ್ದಿದ್ದರಿಂದ ಮಲೆನಾಡು, ಕರಾವಳಿ ಭಾಗದಲ್ಲಿ ಭೂಮಿ ಒಣಗಲು ಅವಕಾಶವೇ ಸಿಕ್ಕಿಲ್ಲ ಎಂಬಂತಾಗಿ ಕೃಷಿಕರು ಅತಿಯಾದ ಮಳೆಯಿಂದ ಕಂಗಾಲಾಗಿದ್ದಾರೆ.*ಭಾರಿ ಮಳೆಯಾಗಿರುವ ಪ್ರದೇಶಗಳು*ಸಿದ್ದಾಪುರ, ಆಗುಂಬೆ, ಸುಬ್ರಹ್ಮಣ್ಯ, ಲಿಂಗನಮಕ್ಕಿ, ತೀರ್ಥಹಳ್ಳಿ, ಭಟ್ಕಳ, ಹೊನ್ನಾವರ, ಮಂಕಿ, ತಾಳಗುಪ್ಪ, ಜಯಪುರ, ಕೋಟಾದಲ್ಲಿ ಭಾರಿ ಮಳೆಯಾಗಿದೆ. ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ.ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.ಕಳೆದ 24 ಗಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನಗರಬಸ್ತಿಕೇರಿಯಲ್ಲಿ 76 ಮಿ.ಮೀ ಮಳೆಯಾಗಿದೆ. ನಿನ್ನೆ ರಾಜ್ಯದಲ್ಲಿ ಅತೀ ಹೆಚ್ಚು ಮಳೆಯಾಗಿರುವ ಪ್ರದೇಶ ಇದಾಗಿದೆ.ನಿನ್ನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದೆ. ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆರಾಯ ನಿನ್ನೆ ಸಂಜೆ ಬೆಂಗಳೂರಿಗೆ ತಂಪೆರೆದಿದ್ದಾನೆ. ಇಂದು ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ನಿರೀಕ್ಷೆ ಇದೆ.*ಎಲ್ಲೆಲ್ಲಿ ಸಾಧಾರಣ ಮಳೆಯಾಗಿದೆ?*ಕದ್ರ, ಕಾರ್ಕಳ, ಶೃಂಗೇರಿ, ಸುಳ್ಯ, ಮಾಣಿ, ಮೂಡುಬಿದಿರೆ, ಧರ್ಮಸ್ಥಳ, ಮಂಚಿಕೆರೆ, ಭಾಗಮಂಡಲ, ಸಾಗರ, ತ್ಯಾಗರ್ತಿ, ಬಂಟವಾಳ, ಬೆಳ್ತಂಗಡಿ, ವಿರಾಜಪೇಟೆ, ಬೆಳಗಾವಿ, ಹೊಳೆ ಹೊನ್ನೂರು, ಧಾರವಾಡ, ತರೀಕೆರೆ, ಸಂತೆಬೆನ್ನೂರು, ಅಜ್ಜಂಪುರ, ಬರಗೂರು, ನುಗ್ಗೇಹಳ್ಳಿ, ಚಿತ್ರದುರ್ಗ, ಅಜ್ಜಂಪುರ, ಹೊನ್ನಾಳಿ, ಚಿಕ್ಕಮಗಳೂರು, ಎಚ್‌ಡಿ ಕೋಟೆ, ಕುಶಾಲನಗರ, ಹಿರೆಕೆರೂರು, ಬಂಟವಾಳದಲ್ಲಿ ಮಳೆಯಾಗಿದೆ.*ಬೆಂಗಳೂರು ಹವಾಮಾನ ವರದಿ*ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಅಲ್ಲಲ್ಲಿ ಮಳೆಯಾಗಲಿದೆ, 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಲ್‌ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.*ಕರಾವಳಿಯಲ್ಲಿ ಮಳೆ ಜೋರು*ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇನ್ನೂ ಕೆಲವು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಗದಗ, ಹಾವೇರಿ, ಬಾಗಲಕೋಟ, ರಾಯಚೂರು, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇದಲ್ಲದೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 6ರವರೆಗೆ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
Be the first to comment