ಮಕ್ಕಳು ಆರೋಗ್ಯದ ಕಡೆ ಹೆಚ್ಚು ಒತ್ತು ನೀಡಬೇಕು ಆಯುಷ್ ಇಲಾಖೆಯಿಂದ ಮಕ್ಕಳಿಗೆ ರೋಗ ನಿರೋಧಕ ಶಕ್ತಿಯ ಔಷಧಿ ವಿತರಣೆ

ವರದಿ: ಹೈದರ್ ಸಾಬ್, ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ

ಪ್ರತಿ ವಿದ್ಯಾರ್ಥಿಗಳು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಬೇಕು. ಯಾವುದೇ ಕಾಯಿಲೆಗಳು ಬಾರದಂತೆ ಮುನ್ನಚ್ಚರಿಕೆಯಾಗಿ ನಮ್ಮ ದೇಹದ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಆಯುಷ್ ಇಲಾಖೆಯ ವೈದ್ಯೆ ಡಾ.ವಿಜಯಲಕ್ಷ್ಮೀ ತಿಳಿಸಿದರು.ದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮದ ಸರಕಾರಿ ಪ್ರೌಢ ಶಾಲೆ ಆವರಣದಲ್ಲಿ ಆಯುಷ್ ಇಲಾಖೆಯ ವತಿಯಿಂದ ಮಕ್ಕಳಿಗೆ ವೈದ್ಯಕೀಯ ತಪಾಸಣೆ ಮತ್ತು ರೋಗ ನಿರೋಧಕ ಆಯುರ್ವೆಧಿಕ್ ಔಷಧಿ ಕಿಟ್‌ಗಳನ್ನು ವಿತರಿಸಿ ಅವರು ಮಾತನಾಡಿದರು. ಕೋವಿಡ್-೧೯ ಮೂರನೇ ಅಲೆಯು ಮಕ್ಕಳಲ್ಲಿ ಸಾಕಷ್ಟು ಪ್ರಭಾವ ಬೀರಲಿದ್ದು, ಮುಂಜಾಗೃತ ಕ್ರಮವಾಗಿ ಲಸಿಕೆ ಬರುವವರೆಗೆ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಅತೀ ಮುಖ್ಯ. ಪ್ರತಿಯೊಬ್ಬರು ಆಯುಷ್ ಇಲಾಖೆಯಿಂದ ನೀಡುವ ಆಯುರ್ವೆದಿಕ್ ಬೋಸ್ಟರ್ ಕಿಟ್‌ಗಳಲ್ಲಿರುವ ಚವನಪ್ರಾಶ, ಸಂಶಮನವಟಿ ಮಾತ್ರೆ, ಅಶ್ವಗಂಧವಟಿ ಮಾತ್ರೆಗಳನ್ನು ನಿಯಮಿತವಾಗಿ ತೆಗೆದುಕೊಳ್ಳಬೇಕು. ಆರೋಗ್ಯದಲ್ಲಿ ಏನೇ ಸಮಸ್ಯೆ ಕಂಡುಬಂದರೆ, ಕೂಡಲೇ ಸ್ಥಳೀಯ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ವಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಬೇಕು. ಆರೋಗ್ಯ ಚೆನ್ನಾಗಿದ್ದರೆ, ಏನಾನ್ನಾದರೂ ಸಾಧಿಸಲು ಸಾಧ್ಯ. ಶಿಕ್ಷಕರು ಹೇಳಿದ್ದನ್ನು ಗಮನವಿಟ್ಟು ಕೇಳಬೇಕು. ಕೊರೊನಾ ಮೂರನೇ ಅಲೆಗೆ ಸಂಬಂಧಿಸಿದಂತೆ ಎಲ್ಲರೂ ಜಾಗೃತರಾಗಬೇಕು. ತಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡು ನಿಶ್ಚಿಂತರಾಗಿರಬೇಕು ಎಂದು ಸಲಹೆ ಮಾಡಿದರು.

CHETAN KENDULI

ಈ ವೇಳೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಶೇಷಾದ್ರಪ್ಪ, ವೈದ್ಯೆ ಡಾ,ಪುಷ್ಪ, ಶುಶ್ರೂಷಕಿ ಸಾಕಮ್ಮ ಶಿಕ್ಷಕಿ ಮಂಜುಳಭಾವಿಕಟ್ಟಿ, ದೈ.ಶಿ.ಶಿಕ್ಷಕ ವೇಣುಗೋಪಾಲ, ಶಾಲಾ ಶಿಕ್ಷಕ ವೃಂದ, ಮಕ್ಕಳು ಇದ್ದರು.

Be the first to comment

Leave a Reply

Your email address will not be published.


*