ಜಿಲ್ಲಾ ಸುದ್ದಿಗಳು
ಮುದ್ದೇಬಿಹಾಳ:
ಕೊವಿಡ್ ಸಮಯದಲ್ಲಿ ವಿಜಯಪುರ ಜಿಲ್ಲೆಯಲ್ಲಿಯೇ ಮುದ್ದೇಬಿಹಾಳ ತಾಲೂಕಿನ ತಾಲೂಕಾ ಆಸ್ಪತ್ರೆಯ ಸಿಬ್ಬಂದಿಗಳು ಶ್ರಮಪಟ್ಟಿದ್ದನ್ನು ಮಾದ್ಯಮದ ಮೂಲಕ ತಿಳಿದುಕೊಂಡ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆಯವರು ಶನಿವಾರ ಇಲ್ಲಿನ ತಾಲೂಕಾ ಆಸ್ಪತ್ರೆಗೆ ಬೇಟಿ ನೀಡಿ ವೈದ್ಯಾಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯದ ಗಡಿ ಪ್ರದೇಶದ ಜಿಲ್ಲೆಗಳಿಗೆ ಸರಕಾರವು ಸಾಕಷ್ಟು ಕಾಳಜಿ ವಹಿಸಿದೆ. ಅದರಂತೆ ಸರಕಾರದ ಯೋಜನೆಯನ್ನು ಸಕ್ರೀಯೆವಾಗಿ ಪರಪೂರ್ಣವಾಗುವಂತೆ ಮಾಡಿದ ಹಿರಿಮೆ ಆಯಾ ಗಡಿ ಜಿಲ್ಲಾಧಿಕಾರಿಗಳು ಸಮರ್ಥವಾಗಿ ನಿಭಾಯಿಸಿದ್ದಾರೆ. ಇದರಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಾ ಆಸ್ಪತ್ರೆಯ ಸಿಬ್ಬಂದಿಗಳು ಹೆಚ್ಚಿನ ಶ್ರಮ ವಹಿಸಿದ್ದು ಶ್ಲಾಘನೀಯವಾದದ್ದು. ಬೆಂಗಳೂರಿನಿಂದ ಮುದ್ದೇಬಿಹಾಳ ತಾಲೂಕಾ ಆಸ್ಪತ್ರೆಗೆ ಬಂದು ಕೊವಿಡ್ ಚಿಕಿತ್ಸೆಗೆ ಒಳಗಾಗಿ ಸಂಪೂರ್ಣ ಗುಣಮುಖರಾಗಿದ್ದು ಹೆಮ್ಮೆಯ ಸಂಗತಿಯಾಗಿದೆ. ಇಂತಹ ಸಿಬ್ಬಂದಿಗಳಿಗೆ ಅಭಿನಂದನೆ ತಿಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು.
ಇದೇ ವೇಳೆಯಲ್ಲಿ ಮುದ್ದೇಬಿಹಾಳ ತಾಲೂಕಿಗೆ ಮಂಜೂರಾದ ಆಮ್ಲಕನಿಕ ಉತ್ಪಾದನಾ ಘಟಕದ ಕಾಮಗಾರಿಯನ್ನು ವಿಕ್ಷಿಸಿದ ಸಚಿವೆ ಶಶಿಕಲಾ ಜೊಲ್ಲೆ ಕೂಡಲೇ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ತಜ್ಞರ ಸಲಹೆಯಂತೆ ಮುಂದಿನ ದಿನಗಳಲ್ಲಿ ಕೊರೊನಾ 3ನೇ ಅಲೆ ಬರುವ ಸಾದ್ಯತೆಯ ದಿನಗಳಲ್ಲಿ ತಾಲೂಕು ಸೇರಿದಂತೆ ಸುತ್ತಮುತ್ತಲಿನ ಪಟ್ಟಣಗಳಿಗೆ ಆಮ್ಲಜಕಿನದ ತೊಂದರೆಯಾಗದಂತೆ ನಿಭಾಯಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಹಾಗೂ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಮಾಜಿ ತಾಪಂ ಅಧ್ಯಕ್ಷೆ ಲಕ್ಷ್ಮಿಂಬಾಯಿ ಹವಾಲ್ದಾರ, ತಾಲೂಕಾ ಆರೋಗ್ಯಾಧಿಕಾರಿ ಡಾ.ಸತೀಶ ತೀವಾರಿ, ಆಸ್ಪತ್ರೆಯ ತಾಲೂಕಾ ವೈದ್ಯಾಧಿಕಾರಿ ಡಾ.ಅನೀಲು ಶೀಗುಣಸಿ ಸೇರಿದಂತೆ ಇತರರಿದ್ದರು.
Be the first to comment