ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ನಡಹಳ್ಳಿ…! ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯ 3ನೇ ಹಂತದಲ್ಲಿ ಕ್ಷೇತ್ರಕ್ಕೆ ಒಟ್ಟು 38 ಕೋಟಿ ಹಣ ಮಂಜೂರು….!!!

ವರದಿ: ಚೇತನ ಕೆಂದೂಳಿ, ಸಂಪಾದಕರು

ಜಿಲ್ಲಾ ಸುದ್ದಿಗಳು

CHETAN KENDULIL

ಮುದ್ದೇಬಿಹಾಳ:

“ನಾನು ಶಾಸಕನಾಗುವ ಮುಂಚಿಯೇ ಕ್ಷೇತ್ರದ ಮತದಾರರಿಗೆ ನೀಡಿದ ಭರವಸೆಯಂತೆ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳ ಸೇರಿದಂತೆ ಜನರ ಮೆಚ್ಚುಗೆಯಾಗುವಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಹಣ ಮಂಜೂರಾತಿ ಮಾಡಿಸಿದ್ದೇನೆ. ಕ್ಷೇತ್ರದ ಅಭಿವೃದ್ಧಿಯೊಂದೇ ನನ್ನ ಗುರಿಯಾಗಿದೆ. ಇನ್ನೂ ರಾಜ್ಯ ಸರಕಾರ ಮಂತ್ರಿಸ್ಥಾನ ನೀಡುವಲ್ಲಿ ಎಲ್ಲ ದಾರಿಯಲ್ಲಿಯೂ ವಿಚಾರಣೆ ಮಾಡಿ ನೀಡಿದೆ. ಮುಂದಿನ ಬಾರಿಯೂ ರಾಜ್ಯದಲ್ಲಿ ಬಿಜೆಪಿ ಸರಕಾರವೇ ಅಸ್ಥಿತ್ವಕ್ಕೆ ಬರಲಿದೆ.”

-ಎ.ಎಸ್.ಪಾಟೀಲ ನಡಹಳ್ಲಿ, ಶಾಸಕರು ಹಾಗೂ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷರು.

ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯ 3ನೇ ಹಂತದಲ್ಲಿ ಒಟ್ಟು 38 ಕೋಟಿ ರಸ್ತೆ ಕಾಮಗಾರಿಗಳಿಗೆ ಮಂಜೂರಾತಿ ದೊರಕಿದ್ದು ಹಣ ಬಿಡುಗಡೆಗೊಂಡು ಕಾಮಗಾರಿಗಳು ಪ್ರಾರಂಭಗೊಂಡಿದ್ದು ಬರುವ ಡಿಸೆಂಬರ ತಿಂಗಳ ಒಳಗಾಗಿ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.



ತಾಲೂಕಿನ ಮಾದಿನಾಳ, ಬಿದರಕುಂದಿ, ಢವಳಗಿ ಹಾಗೂ ಹುಲ್ಲೂರ ತಾಂಡಾದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿನ ಸಿಸಿ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಮುದ್ದೇಬಿಹಾಳ ಮತಕ್ಷೇತ್ರದ ಕೃಷ್ಣಾ ನದಿದಂಡೆಯ ಎಲ್ಲ ಗ್ರಾಮಗಳಿಗೂ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ ಕಾಮಗಾರಿಗಳು ಪೂರ್ಣಗೊಂಡಿವೆ. ಈ ಗ್ರಾಮಗಳ ನಂತರ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಒಗದಿಸಬೇಕಾದ ಮೂಲಭೂತ ಸೌಕರ್ಯಗಳ ಬಗ್ಗೆ ರಾಜ್ಯ ಸರಕಾರದಡಿಯಲ್ಲಿ ಒತ್ತಾಯಿಸಿ ಅಭಿವೃದ್ಧಿಗಾಗಿ ಹಣ ಬಿಡುಗಡೆ ಮಾಡಿಸಿದ್ದೇನೆ. ಬರುವ ವರ್ಷಗಳಲ್ಲಿ ಪ್ರತಿಯೊಂದು ಗ್ರಾಮದಲ್ಲಿಯೂ ಮೂಲಭೂತ ಸೌಕರ್ಯಗಳು ಸಂಪೂರ್ಣವಾಗಿ ಸಿಗಲಿವೆ ಎಂದು ಅವರು ಹೇಳಿದರು.

ಗ್ರಾಮದ ಅಭಿವೃದ್ಧಿಯ ಕಾಮಗಾರಿಗಳ ಬಗ್ಗೆ ಗ್ರಾಮಸ್ಥರೊಂದಿಗೆ ಚರ್ಚಿಸಿದ ಶಾಸಕ ನಡಹಳ್ಳಿ:

ಮುದ್ದೇಬಿಹಾಳ ಮತಕ್ಷೇತ್ರದ ಪಟ್ಟಣ ಭಾಗ ಸೇರಿದಂತೆ ಗ್ರಾಮೀಣ ಭಾಗದಲ್ಲಿ  ಬಹುತೇಕ ರಸ್ತೆ ಹಾಗೂ ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳ ಕಾಮಗಾರಿಗಳನ್ನು ಒದಗಿಸಲಾಗಿದೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಶಾಸಕರು ಪ್ರತಿಯೊಂದು ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಗ್ರಾಮಸ್ಥರೊಂದಿಗೆ ಆಗಬೇಕಾದ ಕಾಮಗಾರಿಗಳ ಬಗ್ಗೆ ಚರ್ಚಿಸಿದ್ದು ಎಲ್ಲರ ಮೆಚ್ಚುಗೆಯಾಯಿತು. ಅಲ್ಲದೇ ಕೆಲ ಗ್ರಾಮದಲ್ಲಿ ಹಲವು ವರ್ಷಗಳ ಹಿಂದೆ ಚುನಾವಣೆಯಲ್ಲಿ ಮಾತ್ರ ನೋಡಲಾಗುತ್ತಿದ್ದ ಮುಖವು ಕಳೆದ ಮೂರು ವರ್ಷದಿಂದ ಹಲವಾರು ಬಾರಿ ನೋಡಿದಂತಾಗುತ್ತಿದೆ. ಅಲ್ಲದೇ ಗ್ರಾಮೀಣ ಪ್ರದೇಶದಲ್ಲಿ ಹಿಂದೆಂದೂ ಕಾಣದಂತಹ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎನ್ನುವ ಮಾತುಗಳು ಕೇಳಿಬಂದಿತು.

Be the first to comment

Leave a Reply

Your email address will not be published.


*