ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸುವರ್ಣವಕಾಶ ನಿರುದ್ಯೋಗ ಸಮಸ್ಯೆಗೆ ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಉದ್ಯೋಗ ಮೇಳ

ವರದಿ: ಹೈದರ್ ಸಾಬ್, ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ

ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಆಗಸ್ಟ್ 12/8/2021 ರಂದು ಜೂನಿಯರ್ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ ಡಿಗ್ರಿ ಮತ್ತು ಇತರೆ ಕೋರ್ಸುಗಳಿಂದ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳವನ್ನು ಖಾಸಗೀ ಕಂಪನಿಗಳ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಇದರ ಸದುಪಯೋಗವನ್ನು ಪ್ರತಿ ನಿರುದ್ಯೋಗ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಶಾಸಕ ಎಲ್.ಎನ್.ನಾರಾಯಣಸ್ವಾಮಿ ತಿಳಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಉದ್ಯೋಗ ಮೇಳ ಕರಪತ್ರವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಕೌಶಲ್ಯ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀನಾರಾಯಣ್ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

CHETAN KENDULI

ಬಹಳಷ್ಟು ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸ್ಥಾನ ಪಡೆಯಬೇಕೆಂಬ ಆಸೆ ಇರುತ್ತದೆ. ಪೋಷಕರಿಗೂ ಸಹ ನನ್ನ ಮಗ, ಮಗಳು ಒಳ್ಳೆಯ ಕೆಲಸದಲ್ಲಿದ್ದು, ಅವರ ಕಾಲಿನ ಮೇಲೆ ಅವರು ನಿಲ್ಲುವಂತೆ ಆಗಬೇಕೆಂಬ ಆಸೆ ಇರುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗೆ ಉದ್ಯೋಗ ಮೇಳ ಬಹಳಷ್ಟು ಸಹಕಾರಿಯಾಗಲಿದೆ. ಸುಮಾರು ೪೦ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗುವುದರ ಮೂಲಕ ಸುಮಾರು ೬೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಲಿದೆ. ಆಸಕ್ತ ದೇವನಹಳ್ಳಿ ಪಟ್ಟಣದ ನಿರುದ್ಯೋಗ ಯುವಕ/ಯುವತಿಯರು ತಮ್ಮ ವೈಯಕ್ತಿಕ ದಾಖಲೆಗಳು ಹಾಗೂ ಅಂಕಪಟ್ಟಿ, ಇತರೆ ದಾಖಲೆಗಳನ್ನು ಇಟ್ಟುಕೊಂಡು ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಂತಾಗಬೇಕು ಎಂದು ಕರೆ ನೀಡಿದರು.ಈ ವೇಳೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಆರ್.ಮುನೇಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಕೌಶಲ್ಯ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀನಾರಾಯಣ್, ಪುರಸಭಾ ಸದಸ್ಯರಾದ ಮುನಿಕೃಷ್ಣ, ವೈ.ಆರ್.ರುದ್ರೇಶ್, ಯುವ ಜೆಡಿಎಸ್ ಅಧ್ಯಕ್ಷ ಆರ್.ಭರತ್, ಜೆಡಿಎಸ್ ಮುಖಂಡ ಡೇರಿ ನಾಗೇಶ್, ಇತರರು ಇದ್ದರು.

Be the first to comment

Leave a Reply

Your email address will not be published.


*