*ಎಸ್ಸೆಸ್ಸೆಲ್ಸಿ ?% ರಷ್ಟು ಫಲಿತಾಂಶ* *ಶಾಸಕ ಎಲ್ ಎನ್ ನಾರಾಯಣಸ್ವಾಮಿ ಅವರಿಂದ ಅಭಿನಂದನೆ*

ವರದಿ: ಹೈದರ್ ಸಾಬ್, ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ

ಪಟ್ಟಣದ ಪ್ರವಾಸಿ ಮಂದಿರದಲ್ಲಿ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವನ್ನು ಶಾಸಕ ಎಲ್.ಎನ್.ನಾರಾಯಣಸ್ವಾಮಿ ರವರು ಬಿಡುಗಡೆ ಗೊಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದಲೂ ಜಿಲ್ಲೆಯ ದೇವನಹಳ್ಳಿ ತಾಲೂಕು ಎಸ್ಸೆಸ್ಸೆಲ್ಸಿ ಯಲ್ಲಿ ಪ್ರಥಮ ಸ್ಥಾನ ಗಳಿಸಿದೆ. 2021-22 ಶೈಕ್ಷಣಿಕ ಸಾಲಿನಲ್ಲಿ ಶೇ.100ರಷ್ಟು ಫಲಿತಾಂಶ ಪಡೆದಿರುವುದು ತಾಲೂಕಿನ ಜನತೆಗೆ ಹೆಮ್ಮೆಯ ವಿಷಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕುಗಳು ಶೈಕ್ಷಣಿಕ ಪ್ರಗತಿ ಯಲ್ಲಿ ಮುಂಚೂಣಿಯಲ್ಲಿ ಇದ್ದವು, ಅದೇರೀತಿ ಸುಮಾರು ವರ್ಷಗಳಿಂದ ತಾಲೂಕು ಉತ್ತಮ ಫಲಿತಾಂಶ ಪಡೆಯುತ್ತಿರುವುದು ಇಲ್ಲಿಯೂ ಸಹ ವಿದ್ಯಾಭ್ಯಾಸಕ್ಕೆ ಅನುಕೂಲಕರವಾದ ಸ್ಥಳವೆಂದು ಸಾಬೀತು ಪಡಿಸಿದೆ. ಈ ನಿಟ್ಟಿನಲ್ಲಿ ತಾಲೂಕಿನ ಶಿಕ್ಷಕರ ಪಾತ್ರ ಅಪಾರವಾದದ್ದು. ಇದಕ್ಕೆಲ್ಲಾ ಪೂರಕವಾಗಿ ಸಹಕರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅಧಿಕಾರಿಗಳ, ಪುರಸಭೆ, ಗ್ರಾಮ ಪಂಚಾಯಿತಿ, ಸಂಘ-ಸಂಸ್ಥೆಗಳ ಶ್ರಮ ಹೆಚ್ಚು ಇದೆ. ಇವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದು ಹೇಳಿದರು.

CHETAN KENDULI

ತಾಲೂಕಿನಲ್ಲಿ ಒಟ್ಟು 3201 ಮಕ್ಕಳು ಪರೀಕ್ಷೆ ಬರೆದಿದ್ದು, 3201 ಮಕ್ಕಳು ಉತ್ತೀರ್ಣರಾಗಿ ದ್ದಾರೆ. 1356 ಮಕ್ಕಳು ಎ+, 1460 ಎ, 377 ಬಿ, 8 ಸಿ ಗ್ರೇಡ್ ಪಡೆದಿದ್ದಾರೆ. ಮುಂದೆಯೂ ಸಹ ತಾಲೂಕು ಪ್ರಥಮ ಸ್ಥಾನ ಪಡೆದು ತಾಲೂಕಿನ ಹೆಗ್ಗಳಿಕೆಗೆ ಪಾತ್ರವಾಗಬೇಕೆಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಕುಂದಾಣ ವಿಎಸ್ಸೆಸ್ಸೆನ್ ಅಧ್ಯಕ್ಷ ದಿನ್ನೂರು ರಾಮಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಅಶ್ವತ್ಥ್ ನಾರಾಯಣ್, ಟಿಪಿಇಒ ಜನಾರ್ಧನ್, ಇಲಾಖಾಧಿಕಾರಿ ಮಂಜುನಾಥ್, ತಿಂಡ್ಲು ಸರಕಾರಿ ಶಾಲೆಯ ಮುಖ್ಯ ಶಿಕ್ಷಕ ಮುನೇಗೌಡ, ಮುಖಂಡರು, ಇದ್ದರು.

Be the first to comment

Leave a Reply

Your email address will not be published.


*