ರಾಜ್ಯ ಸುದ್ದಿಗಳು
ದೇವನಹಳ್ಳಿ
ಸುಮಾರು ವರ್ಷಗಳಿಂದ ಅಭಿವೃದ್ಧಿ ಕಾಣದೆ ನೆನೆಗುದ್ದಿಗೆ ಬಿದ್ದಂತಹ ಬೊಮ್ಮವಾರದ ರಸ್ತೆ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಎಲ್.ಎನ್.ನಾರಾಯಣಸ್ವಾಮಿ ತಿಳಿಸಿದರು.ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮಕ್ಕೆ ತೆರಳುವ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ ಅವರು ಮಾತನಾಡಿದರು. ಅಕ್ಕುಪೇಟೆಯಿಂದ ಬೊಮ್ಮವಾರದ ದಿನ್ನೆ ವರೆಗೆ ರಸ್ತೆ ಕಾಮಗಾರಿ ಚುರುಕಾಗಿ ನಡೆಯುತ್ತಿದೆ. ಅದನ್ನು ಖುದ್ದಾಗಿ ಪರಿಶೀಲಿಸುತ್ತಿದ್ದೇನೆ. ಗುಣಮಟ್ಟದ ಕಾಮಗಾರಿಯ ಬಗ್ಗೆ ಮೂರನೇ ವ್ಯಕ್ತಿ ತಂಡದಿಂದ ಪರಿಶೀಲನೆ ನಡೆಯುತ್ತದೆ. ವರದಿಯನ್ನು ಆಧರಿಸಿ ಗುಣಮಟ್ಟ ಖಾತರಿಯಾಗುತ್ತದೆ. ಇದರಲ್ಲಿ ಕಳಪೆ ಕಾಮಗಾರಿ ಕಂಡುಬಂದರೆ ಕೂಡಲೇ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ದೇವನಹಳ್ಳಿ ತಾಲೂಕಿನ ಚಪ್ಪರದಕಲ್ಲು ಸರ್ಕಲ್‌ನಿಂದ ಕೊಯಿರ ಮಾರ್ಗವಾಗಿ ಹಾದು ಹೋಗುವ ರಸ್ತೆಯ ಕಾಮಗಾರಿಯುವ ಕಳಪೆಯಾಗುತ್ತಿದೆ ಎಂಬುವುದು ಸಾರ್ವಜನಿಕರಿಂದ ದೂರು ಬಂದಿರುತ್ತದೆ. ಕಳಪೆ ಆಗಲು ಸಾಧ್ಯವಿಲ್ಲ. ಒಂದು ವೇಳೆ ಕಳಪೆ ಕಾಮಗಾರಿ ಮಾಡಿದ್ದರೆ, ಕ್ರಮ ಕೈಗೊಳ್ಳಲಾಗುತ್ತದೆ. ಮೂರನೇ ವ್ಯಕ್ತಿ ತಂಡ ಪರಿಶೀಲಿಸುವ ಕಾರ್ಯ ನಡೆಯುತ್ತಿದೆ ಎಂದರು.ಈ ವೇಳೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಆರ್.ಮುನೇಗೌಡ, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ನಾಗೇಶ್, ಸದಸ್ಯ ಜಿ.ಎ.ರವೀಂದ್ರ, ಇತರರು ಇದ್ದರು.
Be the first to comment