ಜಿಲ್ಲಾ ಸುದ್ದಿಗಳು
ಬಾಗಲಕೋಟೆ : ಗ್ರಾಮೀಣ ಭಾಗದಲ್ಲಿ ದ್ರವತ್ಯಾಜ್ಯ ನಿರ್ವಹಣೆಗೆ ಹೆಚ್ಚು ಒತ್ತು ನೀಡುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್ ತಿಳಿಸಿದರು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಸ್ವಚ್ಚ ಭಾರತ ಮಿಷನ್, ಸಿಡಿಡಿ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡ ಎರಡನೇ ಹಂತದ ದ್ರವತ್ಯಾಜ್ಯ ನಿರ್ವಹಣೆ ಕುರಿತು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ದ್ರವತ್ಯಾಜ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಒಣ ಮತ್ತು ದ್ರವತ್ಯಾಜ್ಯ ಪ್ರತ್ಯೇಕಗೊಳಿಸಬೇಕು. ದ್ರವತ್ಯಾಜ್ಯ ನಿರ್ವಹಣೆಯಿಂದ ಪರಿಸರ ಸ್ವಚ್ಚತೆ ಕಾಪಾಡಲು ಸಾಧ್ಯವಾಗುತ್ತದೆ ಎಂದರು.
ಗ್ರಾಮಗಳಲ್ಲಿನ ಚರಂಡಿಯ ನೀರು ಸರಾಗವಾಗಿ ಹರಿಯುವಂತಾಗಬೇಕು. ಇಲ್ಲದಿದ್ದತೆ ರಸ್ತೆಯ ಮೇಲೆ ಹರಿಯುವದರಿಂದ ರಸ್ತೆಗಳು ಸಹ ಹಾಳಾಗುತ್ತವೆ. ಆದ್ದರೆಇಂದ ಗ್ರಾಮ ಸ್ವಚ್ಛತೆಗೆ ಹೆಚ್ಚು ಗಮನ ಹರಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ನೋಡಲ್ ಅಧಿಕಾರಿಗಳಿಗೆ ಹಾಗೂ ಜಿ.ಪಂ ವಿವಿಧ ಯೋಜನೆಯ ಅಭಿಯಂತರರಿಗೆ ದ್ರವತ್ಯಾಜ್ಯ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ (ಡಿಆರ್‍ಡಿಎ) ಎಂ.ವಿ.ಚಳಗೇರಿ, ಸಿಡಿಡಿ ಸಂಸ್ಥೆಯ ಆಂಡ್ರೀಸ್ ಜಾಕೋಬ್, ದೈವರ್ಶಿ, ಮಧು, ಜಿ.ಪಂ ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ಸಮಾಲೋಚಕ ಶ್ರೀಶೈಲ ಬೆಳವಲಿ, ವೈ.ಕೆ.ಪಾರ್ಸಿ, ಸಾಗರ ವಾಲಿಕಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
Be the first to comment