*ದೇವನಹಳ್ಳಿ ಪ್ರವಾಸಿ ಮಂದಿರಕ್ಕೆ ಸಂಸದ ಭೇಟಿ* _ನೂತನ ಗ್ರಾಪಂ ಕಟ್ಟಡ ಉದ್ಘಾಟನೆಗೆ ಆಗಮನ_ _ರಾಜ್ಯದ ರಾಜಕಾರಣದ ಬಗ್ಗೆ ಮಾಹಿತಿ_

ವರದಿ: ಹೈದರ್ ಸಾಬ್, ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ

ದೇವನಹಳ್ಳಿ ಪ್ರವಾಸಿ ಮಂದಿರದಲ್ಲಿ ತಾಲೂಕಿನ ಚನ್ನರಾಯಪಟ್ಟಣ ಗ್ರಾಮಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ ಭೇಟಿ ನೀಡಿದರು.ಕೆಲ ಕಾಲ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಲ್.ಎನ್.ನಾರಾಯಣಸ್ವಾಮಿ, ಜೆಡಿಎಸ್ ಮುಖಂಡರು ಹಾಗೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರೊಂದಿಗೆ ಚರ್ಚಿಸಿದರು. ನಂತರ ಅಂಬಿಕ ನ್ಯೂಸ್ ವರದಿಗಾರರೊಂದಿಗೆ ಮಾತನಾಡಿದರು.

CHETAN KENDULI

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಚನ್ನರಾಯಪಟ್ಟಣ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆಗೆ ಆಗಮಿಸಿದ್ದೇನೆ. ಪಂಚಾಯಿತಿಯಿಂದ ಸಾಕಷ್ಟು ಕೆಲಸಗಳು ಆಗಲಿದೆ. ಸ್ವಂತ ಕಟ್ಟಡದ ಅವಶ್ಯಕತೆ ಹೆಚ್ಚು ಇರುತ್ತದೆ. ಅದಕ್ಕಾಗಿ ಉದ್ಘಾಟನೆಗೆ ಬಂದಿದ್ದೇನೆ. ಇನ್ನೂ ಕೊರೊನಾ ಎರಡನೇ ಅಲೆಗೆ ಸಂಬಂಧಿಸಿದಂತೆ, ಸಾಕಷ್ಟು ಅನಾಹುತಗಳು ಆಗಿವೆ. ಮೂರನೇ ಅಲೆಯ ಬಗ್ಗೆ ಮಕ್ಕಳು ಹೆಚ್ಚಿನ ಜಾಗೃತಿಯಿಂದ ಇರಬೇಕಾಗುತ್ತದೆ. ಮೂರನೇ ಅಲೆಯು ಈಗಾಗಲೇ ಸಾಕಷ್ಟು ಮಕ್ಕಳಿಗೆ ಸೋಂಕು ಹರಡಿರುವುದು ಪತ್ರಿಕೆ, ಮಾದ್ಯಮಗಳಲ್ಲಿ ನೋಡಿದ್ದೇನೆ. ಜನರು ಎಚ್ಚೆತ್ತುಕೊಳ್ಳಬೇಕು. ಸರಕಾರದ ಕೊರೊನಾ ನಿಯಮಗಳನ್ನು ಪಾಲಿಸುವಂತೆ ಆಗಬೇಕು ಎಂದು ಮಾಹಿತಿ ನೀಡುವುದರ ಜತೆಗೆ ರಾಜ್ಯದ ರಾಜಕಾರಣದಲ್ಲಿನ ಆಗೂ ಹೋಗುಗಳ ಬಗ್ಗೆ ಮುಕ್ತವಾಗಿ ಮಾಹಿತಿ ನೀಡಿದರು. ಇನ್ನೂ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ, ಈಗಾಗಲೇ ಕೆಲವೊಂದು ಲ್ಯಾಂಡ್ ಅಕ್ವಿಸೇಷನ್‌ನಲ್ಲಿ ಈ ಯೋಜನೆ ತಡವಾಗುತ್ತಿದೆಯೇ ಹೊರತು ಯಾವುದೇ ಸಮಸ್ಯೆ ಇಲ್ಲ. ಸಮಸ್ಯೆ ಶೀಘ್ರ ಇತ್ಯರ್ಥಗೊಳ್ಳಲಿದೆ. ೨೦೨೩ರ ವೇಳೆಗೆ ಎತ್ತಿನಹೊಳೆ ಯೋಜನೆಯ ನೀರು ಈ ಭಾಗಕ್ಕೆ ಬರಲಿದೆ. ನಂತರ ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆ ಈ ಭಾಗದಲ್ಲಿ ಆಗುವುದಿಲ್ಲ. ಜನರೊಂದಿಗೆ ಇದ್ದು, ಜನರಿಗೆ ಅನುಕೂಲ ಮಾಡಿಕೊಡುವುದು ನನ್ನ ಕರ್ತವ್ಯವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅತೀ ಹೆಚ್ಚು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಗಳಾಗಿವೆ ಎಂದರು.

ಇನ್ನೂ ಈ ವೇಳೆ ಸಂಸದ ಬಿ.ಎನ್.ಬಚ್ಚೇಗೌಡ ಅವರನ್ನು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಆತ್ಮಿಯವಾಗಿ ಅಭಿನಂದಿಸಿದರು. ಈ ವೇಳೆಯಲ್ಲಿ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಕಾಂಗ್ರೆಸ್ ಮುಖಂಡರಾದ ಸಿ.ಜಗನ್ನಾಥ್, ಬೂದಿಗೆರೆ ಮುಖಂಡ ನಜೀರ್ ಅಹಮದ್ ಸೇರಿದಂತೆ ಹಲವಾರು ಅಭಿನಂದಿಸಿದರು.

Be the first to comment

Leave a Reply

Your email address will not be published.


*