ರಾಜ್ಯ ಸುದ್ದಿಗಳು
ದೇವನಹಳ್ಳಿ
ದೇಶದ ಹಾಗೂ ಒಳಿತಿಗೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಚುಕ್ಕಾಣಿ ಹಿಡಿಯಲು ಪ್ರತಿಯೊಬ್ಬರು ಸಂಘಟಿತರಾಗಬೇಕು ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಕನ್ನಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಆರ್.ನಾಗೇಶ್ ತಿಳಿಸಿದರು.ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದ ಅವರು ನಿವಾಸದಲ್ಲಿ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತದಿಂದ ದೇಶದ ಪ್ರಗತಿ ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಸಂಪೂರ್ಣ ಯಶಸ್ಸು ಕಂಡಿದೆ. ಕೋವಿಡ್ ಲಸಿಕೆ ಅಭಾವ ಎಲ್ಲಾ ಕಡೆಗಳಲ್ಲಿ ಇದ್ದು, ಸಮರ್ಪಕ ಲಸಿಕೆ ಪೂರೈಸುವಲ್ಲಿ ಕೇಂದ್ರ ನರೇಂದ್ರ ಮೋದಿ ಸರಕಾರ ಸಂಪೂರ್ಣ ವಿಫಲವಾಗಿದ್ದು, ಯಾವುದೇ ಅಭಿವೃದ್ಧಿ ಕಾಣುತ್ತಿಲ್ಲ. ಪ್ರತಿ ಜನರು ಸಂಘಟಿತರಾಗಿ ಕಾಂಗ್ರೆಸ್ ಪಕ್ಷವನ್ನು ಕೇಂದ್ರ ಮತ್ತು ರಾಜ್ಯದಲ್ಲಿ ತರಬೇಕು. ಇದಕ್ಕೆ ಪೂರಕವಾಗಿ ಯುವಕರು ಸ್ವಯಂ ಪ್ರೇರಿತರಾಗಿ ಕಾಂಗ್ರೆಸ್ ಪಕ್ಷ ಸಂಘಟನೆ ಗೆ ಮುಂದಾಗಬೇಕು ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಹಿರಿಯರಾದ ಸೋಮಣ್ಣ, ಮುನೇಗೌಡ, ಚೆನ್ನಕೇಶವ, ಅನಂತ್ ಕುಮಾರ್, ನಾಗೇಶ್, ವೆಂಕಟೇಶ್, ಯುವ ಮುಖಂಡರಾದ ಇಲ್ಲತೊರೆ ಶ್ರೀನಿವಾಸ್, ಚಂದ್ರು, ಚಂದ್ರಶೇಖರ್, ಇತರರು ಉಪಸ್ಥಿತರಿದ್ದರು.
Be the first to comment