ಭಟ್ಕಳದಲ್ಲಿ ಭಯೋತ್ಪಾದನೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಮೃದುದೋರಣೆ ತೋರುತ್ತಿದೆ- ಭಟ್ಕಳ ಬಿಜೆಪಿ ಮಂಡಲ ಆರೋಪ

ವರದಿ: ಕುಮಾರ್ ನಾಯ್ಕ

ಜಿಲ್ಲಾ ಸುದ್ದಿಗಳು

CHETAN KENDULI

ಭಟ್ಕಳ:

ಭಟ್ಕಳದಲ್ಲಿ ಭಯೋತ್ಪಾದಕ ಚಟುವಟಿಕೆಗಳ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಮೃದು ಧೋರಣೆ ಖಂಡಿಸಿ ಪಕ್ಷದ ಕಾರ್ಯಾಲಯದಲ್ಲಿ ಬಿಜೆಪಿ ಭಟ್ಕಳ ಮಂಡಲದ ವತಿಯಿಂದ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರರಾದ ನಾಗರಾಜ್ ನಾಯಕ ರವರು ಮಾತನಾಡಿ ಇತ್ತೀಚೆಗೆ ಐಎಸ್ಐಎಸ್ ಉಗ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಭಯೋತ್ಪಾದನಾ ಚಟುವಟಿಕೆಯಲ್ಲಿ ಪಾಲ್ಗೊಂಡಿರುವ ಭಟ್ಕಳದ ಮೂವರನ್ನು ಎನ್ಐಎ ತಂಡ ಹಾಗೂ ರಾಜ್ಯ ಪೊಲೀಸರ ತಂಡ ಭಯೋತ್ಪಾದನಾ ವಿರೋಧಿ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿತ್ತು.



ಈ ಬಗ್ಗೆ ಕಾಂಗ್ರೆಸ್ ಪಕ್ಷದ ಧುರೀಣರಾದ ಮಾಜಿ ಶಾಸಕರಾದ ಮಂಕಾಳ ವೈದ್ಯ ಹಾಗೂ ಜಿಲ್ಲೆಯ ಕಾಂಗ್ರೆಸ್ ಅಧಿಪತ್ಯವನ್ನು ಅನುಭವಿಸಿದ ಮಾಜಿ ಸಚಿವರಾದ ದೇಶಪಾಂಡೆಯವರು ಯಾವುದೇ ಒಂದು ಭಯೋತ್ಪಾದನೆ ವಿರೋಧಿ ಹೇಳಿಕೆಯನ್ನು ನೀಡದೆ ಭಯೋತ್ಪಾದಕರ ಬಗ್ಗೆ ಮೃದುಧೋರಣೆ ತಳೆದಿರುವ ಬಗ್ಗೆ ಖಂಡನೆ ವ್ಯಕ್ತಪಡಿಸಿದರು. ಕನಿಷ್ಠ ಪಕ್ಷ ತಮ್ಮ ಕ್ಷೇತ್ರದಲ್ಲಿ ಇಂತಹ ಚಟುವಟಿಕೆ ನಡೆಯಬಾರದಿತ್ತು ಎಂದು ಹೇಳಿಕೆ ನೀಡದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಇದೆ ಸಂದರ್ಭದಲ್ಲಿ ಕೊರೋನ ಎರಡನೇ ಅಲೆಯ ಸಂದರ್ಭದಲ್ಲಿ ಮೃತರಾದ ಕೊರೊನಾ ಸೋಂಕಿತರ ಅಂತ್ಯಸಂಸ್ಕಾರವನ್ನು ನೆರವೇರಿಸುವಲ್ಲಿ ಪ್ರಮುಖ ಪಾತ್ರವಹಿಸದ ಪಕ್ಷದ ಪದಾಧಿಕಾರಿಗಳಾದ ಶ್ರೀಕಾಂತ್ ನಾಯ್ಕಹಾಗೂ ತಂಡದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು. ಪತ್ರಿಕಾಗೋಷ್ಠಿಯಲ್ಲಿ ಭಟ್ಕಳ ಮಂಡಲದ ಅಧ್ಯಕ್ಷರಾದ ಸುಬ್ರಾಯ ದೇವಾಡಿಗ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ, ಜಿಲ್ಲಾ ಕಾನೂನು ಪ್ರಕೋಷ್ಠ ಸಂಚಾಲಕರಾದ ಸುರೇಶ ನಾಯ್ಕ, ಜಿಲ್ಲಾ ಮಾಜಿ ಸೈನಿಕರ ಪ್ರಕೋಷ್ಠದ ಸಂಚಾಲಕರಾದ ಶ್ರೀಕಾಂತ ನಾಯ್ಕ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಮೋಹನ ನಾಯ್ಕ ಹಾಗೂ ಭಾಸ್ಕರ್ ದೈಮನೆ, ನಗರ ಮಹಾ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿಯಾದ ಅರುಣ್ ನಾಯ್ಕ ಮುಂತಾದವರು ಹಾಜರಿದ್ದರು.

Be the first to comment

Leave a Reply

Your email address will not be published.


*