ಸ್ವಾತಂತ್ರ್ಯ ದಿನದ ಅಂಗವಾಗಿ ಮಕ್ಕಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

ವರದಿ: ಹೈದರ್ ಸಾಬ್, ಕುಂದಾಣ

ಜಿಲ್ಲಾ ಸುದ್ದಿಗಳು

CHETAN KENDULI

ದೇವನಹಳ್ಳಿ:

ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಲು ಶಾಲಾ ಹಂತದಲ್ಲಿ ಅವರನ್ನು ಸಧ್ರುಡಗೊಳಿಸಬೇಕಾಗುತ್ತದೆ ಎಂದು ಕುಂದಾಣ ಗ್ರಾಮ ಪಂಚಾಯಿತಿ ಸದಸ್ಯ ಮಾಲಾ ದೇವರಾಜ್ ತಿಳಿಸಿದರು.

ದೇವನಹಳ್ಳಿ ತಾಲೂಕಿನ ದೊಡ್ಡ ಚೀಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಪರಿಹಾರಗಳನ್ನು ವಿತರಿಸಿ ಮಾತನಾಡಿದರು. ಇಂದು ಸ್ವಾತಂತ್ರ್ಯ ದಿನಾಚರಣೆ ಎಲ್ಲರೂ ಸಂತೋಷ ಪಡುವಂತ ಹ ಸುದಿನವಾಗಿದೆ. ಮಕ್ಕಳು ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರ ಪುಸ್ತಕಗಳನ್ನು ಓದಬೇಕು. ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಗ್ರಾಮದ ಕಾಂಗ್ರೆಸ್ ಮುಖಂಡ ಡಿ.ಎಂ.ದೇವರಾಜ್ ಮಾತನಾಡಿ, ನಮಗೆ ಆಗಸ್ಟ್ 15ರಂದು ಸ್ವಾತಂತ್ರ್ಯ ಸಿಕ್ಕಿತು. ಸ್ವಾತಂತ್ರ್ಯ ಪಡೆಯಲು ಹಲವಾರು ಮಹನೀಯರು ತಮ್ಮ ಪ್ರಾಣಗಳನ್ನು ಅರ್ಪಿಸಿದ್ದಾರೆ. ಅವರನ್ನು ನೆನಪಿಸಿಕೊಳ್ಳುವ ದಿನ ವಾಗಿರುವುದರಿಂದ ಎಲ್ಲರೂ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಭಕ್ತಿ ಹಾಗೂ ಶ್ರದ್ಧೆಯಿಂದ ಆಚರಿಸುವಂತಾಗಬೇಕು ಎಂದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಹನುಮಂತರಾಯಪ್ಪ, ಸಹ ಶಿಕ್ಷಕಿ ಯಶೋದಮ್ಮ, ಎಸ್ ಡಿ. ಎಂ ಸಿ ಅಧ್ಯಕ್ಷ ನರಸಿಂಹಪ್ಪ ಹಾಗು ಸಹಾಯಕಿ ಮದ್ದೂರಮ್ಮ ಇತರರು ಇದ್ದರು.

Be the first to comment

Leave a Reply

Your email address will not be published.


*