ಜಿಲ್ಲಾ ಸುದ್ದಿಗಳು
ಶಿರಸಿ:
ತೋಟಗಾರಿಕೆ ಮಹಾವಿದ್ಯಾಲಯ, ಶಿರಸಿಯ ಆವರಣದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ದ್ವಜಾರೋಹಣವನ್ನು ನೆರವೇರಿಸಿದ ಮಹಾವಿದ್ಯಾಲಯದ ಡೀನ್ ಡಾ|| ಎನ್.ಕೆ.ಹೆಗಡೆರವರು ದೇಶಕ್ಕೆ ಸ್ವಾತಂತ್ರ್ಯವನ್ನು ಪಡೆಯುವಲ್ಲಿ ಶ್ರಮಿಸಿದ ಎಲ್ಲಾ ಮಹನೀಯರುಗಳನ್ನು ನೆನಪಿಸಿಕೊಂಡು, ಸ್ವಾತಂತ್ರ್ಯದ ಮೌಲ್ಯವನ್ನು ಅರಿತುಕೊಂಡು ಒಳ್ಳೆಯ ರೀತಿಯಲ್ಲಿ ಕಾಪಾಡಿಕೊಂಡು ಹೋಗುವಂತೆ ಕರೆ ನೀಡಿದರು.
ತೋಟಗಾರಿಕೆ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ರೈತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸದಾ ಕಾರ್ಯನಿರ್ವಹಿಸುತ್ತಿದ್ದು, ರೈತರಿಗೆ ಬೇಕಾದ ಕೃಷಿ ತಂತ್ರಜ್ಞಾನ ಮಾಹಿತಿಯನ್ನೊದಗಿಸುತ್ತಿದ್ದು ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳುವಂತೆ ಸೂಚಿಸಿದರು. ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಕೈಗೊಂಡು ಮುಂದಿನ ದಿನಗಳಲ್ಲಿ ತಾಂತ್ರಿಕ ಜ್ಞಾನವನ್ನು ರೈತರಿಗೆ ತಲುಪಿಸುವಂತೆ ಹಾಗೂ “ನವ ಭಾರತ ನಿರ್ಮಾಣ ಸಂಕಲ್ಪವನ್ನು” ಕೈಗೊಂಡು, ನಮ್ಮೆಲ್ಲರಲ್ಲಿ ಮನೆಮಾಡಿರುವ “ಅಬದ್ದತೆ, ಬಡತನ, ಭ್ರಷ್ಟಾಚಾರ, ಭಯೋತ್ಪಾದನೆ, ಜಾತೀಯತೆ ಮತ್ತು ಕೋಮುವಾದ” ಮುಂತಾದ ಆರು ಸಾಮಾಜಿಕ ಶತ್ರುಗಳನ್ನು ಹೊಡೆದೋಡಿಸಲು ಪಣ ತೊಟ್ಟು ನಾಡಿನ ರೈತರ ಏಳಿಗೆಗಾಗಿ ಪ್ರಾಮಾಣಿಕವಾಗಿ ಶ್ರಮಿಸೋಣ ಎಂದು ಕರೆ ನೀಡಿದರು.
ಸ್ವಾತಂತ್ರ್ಯೋತ್ಸವನ್ನು ಎನ್.ಎಸ್.ಎಸ್. ಘಟಕದ ವತಿಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಘಟಕದ ಸಂಯೋಜಕರಾದ ಡಾ. ಅಶೋಕ ಹಾಗೂ ಡಾ. ಶಿವಾನಂದ ಹೊಂಗಲ ಪಾಲ್ಗೊಂಡಿದ್ದರು ಹಾಗೂ ಹಿರಿಯ ಪ್ರಾಧ್ಯಾಪಕರಾದ ಡಾ. ನಾಗೇಶ ನಾಯ್ಕ ಹಾಗೂ ಡಾ. ಆರ್.ಎಸ್. ಹಿರೇಮಠ ಉಪಸ್ಥಿತರಿದ್ದರು.
ಮಹಾವಿದ್ಯಾಲಯದ ಶಿಕ್ಷಕರು ಸಿಬ್ಬಂದಿಗಳು ವಿದ್ಯಾರ್ಥಿಗಳು ಹಾಗೂ ಕಾರ್ಮಿಕ ವರ್ಗದವರು ಭಾಗವಹಿಸಿ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
Be the first to comment