ರಾಜ್ಯ ಸುದ್ದಿಗಳು
ದೇವನಹಳ್ಳಿ
ಸ್ವಾತಂತ್ರ ಭಾರತದ ಇತಿಹಾಸವನ್ನು ಪ್ರತಿಯೊಬ್ಬರು ಅರಿಯಬೇಕು. ಪ್ರತಿ ಯುವ ಪೀಳಿಗೆ ನಮ್ಮ ದೇಶದ ಸಂಸ್ಕೃತಿಯನ್ನು ಎತ್ತಿ ಹಿಡಿಯಬೇಕು ಎಂದು ಕನ್ನಮಂಗಲ ಗ್ರಾಪಂ ಅಧ್ಯಕ್ಷ ಕೆ.ಆರ್.ನಾಗೇಶ್ ತಿಳಿಸಿದರು.ತಾಲೂಕಿನ ಕನ್ನಮಂಗಲ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ೭೫ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ೧೯೪೭ ಆಗಸ್ಟ್ ೧೫ರಂದು ಕೆಂಪುಕೋಟೆಯಲ್ಲಿ ಭಾರತದ ನೂತನ ರಾಷ್ಟ್ರಧ್ವಜವನ್ನು ಹಾರಿಸಿ, ನಂತರ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಆ ಬಳಿಕ ಭಾರತೀಯ ಸೇನಾ ಪಡೆಗಳ ಪಥ ಸಂಚಲನ ಇತ್ಯಾದಿ ನಡೆದವು.
ಈ ಪರಂಪರೆಯು ವರ್ಷದಿಂದ ವರ್ಷಕ್ಕೆ ಪಾಲನೆಯಾಗುತ್ತಲೇ ಬಂದಿದೆ. ಈ ಬಾರಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಇರುವ ಹಿನ್ನೆಲೆಯಲ್ಲಿ ಸೀಮಿತವಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು.ಈ ವೇಳೆಯಲ್ಲಿ ಗ್ರಾಪಂ ಉಪಾಧ್ಯಕ್ಷೆ ನವಿತಾ ಮಂಜುನಾಥ್, ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಮುಖಂಡ ಮುನಿರಾಜು, ಶಾಲಾ ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಗ್ರಾಮಸ್ಥರು ಇದ್ದರು.
Be the first to comment