ಜೀವವಿಮೆ, ಗ್ರಾಮೀಣ ಅಂಚೆ ವಿಮೆ ಉತ್ಪನ್ನಗಳ ಮಾರಾಟಕ್ಕೆ ಅಭ್ಯರ್ಥಿಗಳ ಆಯ್ಕೆ ನೇರ ಸಂದರ್ಶನ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ : ಬಾಗಲಕೋಟೆ ಜಿಲ್ಲಾ ಕೇಂದ್ರ ಅಂಚೆ ಕಚೇರಿಯು ಜಿಲ್ಲಾ ವಿಭಾಗದಲ್ಲಿ ಅಂಚೆ ಜೀವವಿಮೆ ಹಾಗೂ ಗ್ರಾಮೀಣ ಅಂಚೆ ಜೀವವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಆಗಸ್ಟ 26 ರಂದು ಬೆಳಿಗ್ಗೆ 10.30 ಗಂಟೆಗೆ ಬಾಗಲಕೋಟೆ ಸ್ಟೇಶನ್ ರಸ್ತೆ ಬಳಿ ಇರುವ ಅಂಚೆ ಅಧೀಕ್ಷಿಕರ ಕಛೇರಿಯಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತಿಚೀನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರ ಹಾಗೂ ಅಭ್ಯರ್ಥಿಗಳು 18 ರಿಂದ 50 ವರ್ಷದೊಳಗಿನವರಾಗಿದ್ದು, ಹತ್ತನೆ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಎಜೆಂಟರು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡು ಬಂದಲ್ಲಿ ಮತ್ತು ನುರಿತ ಸಂವಹನ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳು 5000 ರೂಗಳ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕು. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರ ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮೀಷನ್ ನೀಡಲಾಗುತ್ತದೆ ಎಂದು ಜಿಲ್ಲಾ ಅಂಚೆ ಅಧೀಕ್ಷಿಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*