ಅಜಾತಶತ್ರು ದಿವಂಗತ ವಾಜಪೇಯಿರವರ ಪುಣ್ಯ ಸ್ಮರಣೆ ಪ್ರಯುಕ್ತ ಗೌರವ ಸಲ್ಲಿಸಿದ ಹಿಂದುಳಿ ವರ್ಗದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ ಪಾಲ ಸುವರ್ಣ

ಉಡುಪಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 3ನೇ ವರ್ಷದ ಪುಣ್ಯತಿಥಿ ಅಂಗವಾಗಿ ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ ಪಾಲ ಸುವರ್ಣ ಸೋಮವಾರ ಗೌರವ ಸಲ್ಲಿಸಿದರು.
ಅಟಲ್ ಬಿಹಾರಿ ವಾಜಪೇಯಿ ಅವರ ಪೋಟೋಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅಗಲಿದ ನಾಯಕನಿಗೆ ಗೌರವ ಸಲ್ಲಿಸಿದರು.

ಇವರೊಂದಿಗೆ ರಾಜ್ಯದ ಬಿಜೆಪಿ ಮುಖಂಡರು ಮತ್ತು ಪಕ್ಷದ ಎಲ್ಲ ವಿಭಾಗದ ಗಣ್ಯರು ಗೌರವ ಸಲ್ಲಿಸಿದರು. ವಾಯಪೇಯಿ ಅವರ

ದೀರ್ಘಕಾಲದ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ದೇಶದ ಪ್ರಮುಖ ನಾಯಕರಲ್ಲಿ ಒಬ್ಬರು ಮತ್ತು ಭಾರತೀಯ ಜನತಾ ಪಕ್ಷದ ಸ್ಥಾಪಕ ಸದಸ್ಯರಾದ ವಾಜಪೇಯಿ ಅವರು ಆಗಸ್ಟ್ 16, 2018 ರಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.

ADVERTISEMENT

ಸಾಮಾಜಿಕ ಜಾಲತಾಣ ಟ್ವಿಟರ್ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ಅವರ ವ್ಯಕ್ತಿತ್ವ, ಪ್ರೀತಿಯ ಸ್ವಭಾವ, ಬುದ್ಧಿ ಹಾಗೂ ಹಾಸ್ಯಗಳನ್ನು ನೆನಪಿಸಿಕೊಳ್ಳುತ್ತಿದ್ದೇವೆ. ರಾಷ್ಟ್ರದ ಪ್ರಗತಿಗೆ ಅವರ ಕೊಡುಗೆಗಳನ್ನು ನೆನಪಿಸಿಕೊಳ್ಳುತ್ತಿದ್ದೇವೆ. ಅಟಲ್ ಜೀ ಅವರು ನಮ್ಮ ಜನರ ಹೃದಯ ಮತ್ತು ಮನಸ್ಸಿನಲ್ಲಿ ಸದಾ ವಾಸಿಸುತ್ತಿದ್ದಾರೆ. ಇಂದು, ಅವರ ಪುಣ್ಯ ತಿಥಿಯಾಗಿದ್ದು, ಸದೈವ ಅಟಲ್‌ಗೆ ಹೋಗಿ ಗೌರವ ಸಲ್ಲಿಸಲಾಯಿತು ಎಂದು ಹೇಳಿದ್ದಾರೆ.

Be the first to comment

Leave a Reply

Your email address will not be published.


*