ರಾಜ್ಯ ಸುದ್ದಿಗಳು
ದೇವನಹಳ್ಳಿ
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಸೌಲಭ್ಯ ದೊರೆಯುವಂತಾಗಬೇಕು. ಸದೃಢ ಸಮಾಜ ನಿರ್ಮಾಣ ಮಾಡಲು ಸರಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಯಿರ ಗ್ರಾಪಂ ಅಧ್ಯಕ್ಷೆ ವಿ.ರಮ್ಯ ಶ್ರೀನಿವಾಸ್ ತಿಳಿಸಿದರು.ದೇವನಹಳ್ಳಿ ತಾಲೂಕಿನ ಕೊಯಿರ ಗ್ರಾಪಂ ವ್ಯಾಪ್ತಿಯ ದೊಡ್ಡಗೊಲ್ಲಹಳ್ಳಿ ಗ್ರಾಮದಲ್ಲಿ ರೈತ ಬಂಧು ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸರಕಾರ ರೈತರಿಗಾಗಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಪೌಷ್ಠಿಕ ಕೈತೋಟ, ರೈತ ಮಿತ್ರ, ರೈತನ ಬಂಧು, ಎರೆಹುಳು ತೊಟ್ಟಿ ನಿರ್ಮಾಣ ಹೀಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿರುವ ಹಿನ್ನಲೆಯಲ್ಲಿ ಆಗಸ್ಟ್ ೧೫ ರಿಂದ ಅಕ್ಟೋಬರ್ ೧೫ರ ತನಕ ಜಮೀನು ಹೊಂದಿರುವ ರೈತರು ಈ ಯೋಜನೆಯ ಫಲಾನುಭವಿಗಳಾಗಲು ಅರ್ಹರಾಗಿರುತ್ತಾರೆ.
ತಮ್ಮ ಜಮೀನಿನಲ್ಲಿ ಸರಕಾರದ ಸಹಾಯಧನ ಪಡೆದುಕೊಂಡು ಆರ್ಥಿಕವಾಗಿ ಮುಂಬರಲು ಸಹಕಾರಿಯಾಗಲಿದೆ. ಅರ್ಹ ರೈತರು ಗ್ರಾಪಂಗೆ ಬಂದು ಅರ್ಜಿ ಸಲ್ಲಿಸಬೇಕು ಎಂದು ಹೇಳಿದರು.ಈ ವೇಳೆಯಲ್ಲಿ ಗ್ರಾಪಂ ಸದಸ್ಯ ರಾಮಚಂದ್ರಪ್ಪ, ಕಾರ್ಯದರ್ಶಿ ಆದೇಪ್ಪ, ಸಿಬ್ಬಂದಿಗಳಾದ ಬೈರೇಗೌಡ, ಮುನೇಗೌಡ, ಮುನಿರಾಜು ಮತ್ತಿತರರು ಇದ್ದರು.
Be the first to comment