ರಾಜ್ಯ ಸುದ್ದಿಗಳು
ದೇವನಹಳ್ಳಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊರೊನಾ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ಆರೋಗ್ಯ ಸಚಿವ ಡಾ.ಕೆ ಸುಧಾಕರ್ ನೇತೃತ್ವದಲ್ಲಿ ಕೊರೊನಾ ಪ್ರಗತಿ ಪರಿಶೀಲನೆ ಸಭೆಯು ಎರಡು ಗಂಟೆ ತಡವಾಗಿ ಆರಂಭವಾಯಿತು. ಸಚಿವರು ಆಗಮಿಸಿ ಸಭೆಗೆ ಚಾಲನೆ ನೀಡಿದರು.ಕೊರೊನಾ ನಿಯಂತ್ರಣ ಕುರಿತು ತೆಗೆದುಕೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಜಿಲ್ಲಾಸ್ಪತ್ರೆಗೆ ಅನುದಾನವಿದೆ ಆದಷ್ಟು ಬೇಗ ಜಿಲ್ಲಾಸ್ಪತ್ರೆ ಪ್ರಾರಂಭಿಸಬೇಕು. ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಯಾವ್ಯಾವ ರೀತಿಯಲ್ಲಿ ಕ್ರಮ ಕೈಗೊಂಡಿದ್ದೀರಿ ಎಂದು ಆರೋಗ್ಯ ಇಲಾಖಾಧಿಕಾರಿಗಳಿಂದ ಮಾಹಿತಿ ಪಡೆದು, ಸಲಹೆ ಸೂಚನೆ ನೀಡಿದರು.
ಇನ್ನೂ ಸಭೆಯಲ್ಲಿ ಡಿಎಚ್ಒ ತಿಪ್ಪೇಸ್ವಾಮಿ ಅವರನ್ನು ಉದ್ದೇಶಿಸಿ ಮಾತನಾಡಿ,
ಕೊರೊನಾ ಬಂದು ಒಂದುವರೆ ವರ್ಷವಾದರೂ ನೀವು ಸರಿಯಾಗಿ ಕೆಲಸ ಮಾಡ್ತಿಲ್ಲವೆಂದರೆ ಹೇಗೆ ಅಂತಾ ಪುಲ್ ಕ್ಲಾಸ್ ತೆಗೆದುಕೊಂಡರು. ಕೆಲಸ ಮಾಡೋದಾದ್ರೆ ಮಾಡಿ ಇಲ್ಲಂದ್ರೆ ಮನೆಕಡೆ ನಡಿರಿ ಅಂತಾ ಗರಂ ಆದರು.ಈಗಾಗಲೇ 3ನೇ ಅಲೆ ಜಿಲ್ಲೆಗೆ ತಟ್ಟದಂತೆ ಎಲ್ಲಾ ರೀತಿಯಲ್ಲೂ ಜಿಲ್ಲಾಡಳಿತ ಸಜ್ಜಾಗಿದೆ. ಮಕ್ಕಳು ಮೇಲೆ ಪ್ರಭಾವ ಬೀರದಂತೆ ಎಚ್ಚರವಹಿಸಬೇಕು. ಲಸಿಕೆ ಕೊರತೆ ಇರುವುದರಿಂದ ಜಿಲ್ಲೆಗೆ ಲಸಿಕೆ ಪ್ರಮಾಣ ಹೆಚ್ಚಿಸಲಾಗುತ್ತದೆ. ಪರೀಕ್ಷಾ ಪ್ರಕ್ರಿಯೆ ಚುರುಕುಗೊಳಿಸಬೇಕು ಎಂದು ಹೇಳಿದರು.ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್, ಶಾಸಕ ಶರತ್ ಬಚ್ಚೇಗೌಡ, ಆ.ದೇವೆಗೌಡ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಸಿಇಒ ಎಂ.ಆರ್.ರವಿಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಇದ್ದರು.
Be the first to comment