ಜಿಲ್ಲಾ ಸುದ್ದಿಗಳು
ಕಾರವಾರ
ಬೆಂಗಳೂರ ನಗರದ ಮಾದರಿಯಲ್ಲಿ ಸಾರ್ವಜನಿಕ ವಾಹನ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಂಚಾರ ನಿರ್ವಹಣಾ ಕೇಂದ್ರವನ್ನು ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಶನಿವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಾಲನೆಗೊಳಿಸಿದರು.
ನಂತರ ಮಾತನಾಡಿದ ಅವರು ನಗರದಲ್ಲಿ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿದ್ದು ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ನಗರದ ಪ್ರಮುಖ ವೃತ್ತಗಳಲ್ಲಿ ಅತ್ಯಾಧುನಿಕ 360 ಡಿಗ್ರಿಯಲ್ಲಿ ತಿರುಗುವ ಹೈ ರೆಸೂಲೆಷನ್ ಸಿಸಿ ಕ್ಯಾಮೆರಾಗಳನ್ನು ಮತ್ತು ವಾಹನ ಸವಾರರಿಗೆ ಸೂಚನೆಗಳನ್ನು ನೀಡಲು ಧ್ವನಿವರ್ಧಕಗಳನ್ನು ಅಳವಡಿಸಲಾಗಿದ್ದು ನಿರ್ವಹಣಾ ಕೇಂದ್ರದಿಂದಲೇ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲಾಗುತ್ತದೆ ಹಾಗೂ ವಾಹನ ಸವಾರರಿಗೆ ಸೂಚನೆಗಳನ್ನು ಸಹ ನೀಡಲಾಗುತ್ತದೆ,
ನಿರ್ವಹಣಾ ಕೇಂದ್ರಕ್ಕೆ ಪ್ರತ್ಯೆಕ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದ್ದು ದಿನದ 24 ಗಂಟೆಗಳ ಕಾಲ ಸಂಚಾರ ದಟ್ಟಣೆ ಮತ್ತು ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ಮೇಲೆ ಕಣ್ಗಾವಲು ಇಡಲಾಗುತ್ತದೆ ಮತ್ತು ನಿಯಮ ಉಲ್ಲಂಘಿಸುವ ವಾಹನಗಳ ಪೊಟೋಗಳನ್ನು ತೆಗೆದುಕೊಂಡು ಮನೆಗಳಿಗೆ ನೊಟೀಸ್ ಕಳುಹಿಸಲಾಗುತ್ತದೆ ಹಾಗೂ ವೃತ್ತಗಳಲ್ಲಿ ಕರ್ತವ್ಯ ನಿರ್ವಹಿಸುವ ಸಂಚಾರ ಸಿಬ್ಬಂದಿಯವರಿಗೆ ಈ ಕೇಂದ್ರದಿಂದಲೇ ಸೂಚನೆ ನೀಡಲು ಅನುಕೂಲವಾಗಿರುತ್ತದೆ ಎಂದು ತಿಳಿಸಿದರು.
Be the first to comment