ಜಿಲ್ಲಾ ಸುದ್ದಿಗಳು
ಹೊನ್ನಾವರ:
ಬಿಜೆಪಿ ಪಕ್ಷದಲ್ಲಿ ಸ್ವಾರ್ಥಕ್ಕಿಂತ ದೇಶ ಮುಖ್ಯ. ಯಾವ ಪಕ್ಷದಲ್ಲಿಯೂ ಸಿಗದ ನಿಸ್ವಾರ್ಥ ಕಾರ್ಯಕರ್ತರು ಬಿಜೆಪಿ ಪಕ್ಷದಲ್ಲಿದ್ದಾರೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.
ಹೊನ್ನಾವರ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಆಯೋಜಿಸಿದ ಬಿಜೆಪಿ ಬೂತ್ ಅಧ್ಯಕ್ಷರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಬಿಜೆಪಿಯು ಬಲಿಷ್ಟವಾದ ಪಕ್ಷವಾಗಿದೆ. ಚುನಾವಣೆಯಲ್ಲಿ ಗೆಲ್ಲಲು ಬೂತ್ ಮಟ್ಟದ ಕಾರ್ಯಕರ್ತರ ಶ್ರಮವೇ ಕಾರಣವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ಜನಪರ ಯೋಜನೆಗಳನ್ನು ನೀಡಿದ್ದಾರೆ. ಅವರು ನಮ್ಮ ದೇಶಕ್ಕೆ ದೊಡ್ಡ ಆಸ್ತಿ. ಅವರನ್ನು ಉಳಿಸಿಕೊಳ್ಳಬೇಕು. ಮುಂಬರುವ ದಿನದಲ್ಲಿ ಬರುವ ತಾಲೂಕ.ಪಂಚಾಯತ., ಜಿಲ್ಲಾ .ಪಂಚಾಯತ. ಚುನಾವಣಾ ಮೀಸಲಾತಿಯ ಗೊಂದಲದಲ್ಲಿ ನಮ್ಮ ಹಸ್ತಕ್ಷೇಪವಿಲ್ಲ. ಕಾರ್ಯಕರ್ತರ ಕೆಲಸಗಳನ್ನು ಮಾಡಿಕೊಡಲು ಸದಾ ಬದ್ದನಿದ್ದೇನೆ. ಕ್ಷೇತ್ರದಲ್ಲಿ ಎಲ್ಲಾ ಕಡೆ ಅಭಿವೃದ್ದಿ ಕೆಲಸಗಳನ್ನು ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರನ್ನು ಚುನಾವಣೆಯಲ್ಲಿ ಶಕ್ತಿ ಮೀರಿ ಎಲ್ಲರನ್ನು ಗೆಲ್ಲಿಸಲು ಪ್ರಯತ್ನಿಸೋಣ ಎಂದರು.
ಶಾಸಕ ಸುನೀಲ್ ನಾಯ್ಕ ಮಾತನಾಡಿ, ಬಿಜೆಪಿ ಪಕ್ಷದಲ್ಲಿ ಮಾತ್ರ ಕಾರ್ಯಕರ್ತರನ್ನು ಗುರುತಿಸಿ ಗೌರವಿಸುವ ಪರಿಪಾಠವಿದೆ. ಕಾರ್ಯಕರ್ತರು ಪಕ್ಷದ ಜವಬ್ದಾರಿ ಚಾಚು ತಪ್ಪದೇ ಪಾಲಿಸುತ್ತಾರೆ. ಇರ್ವರು ಶಾಸಕರು ಕಾರ್ಯಕರ್ತರಿಗೆ ಯಾವತ್ತೂ ಸ್ಪಂದಿಸುತ್ತಿದ್ದೇವೆ. ಇತ್ತೀಚಿಗೆ ಬಿಜೆಪಿಯನ್ನು ಒಡೆಯುವ ಕೆಲಸವನ್ನು ಈಗಾಗಲೇ ಕೆಲವರು ಮಾಡುತ್ತಿದ್ದಾರೆ. ನಮ್ಮಲ್ಲಿ ವೈಮನಸ್ಸು ಬೇಡ. ಕೆಲವಡೇ ಅಪಪ್ರಚಾರ ನಡೆಯುತ್ತಿದೆ. ಅದನ್ನು ಎದುರಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕಿದೆ ಎಂದರು.
ವೇದಿಕೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ವೆಂಕಟೇಶ ನಾಯಕ, ಮಂಡಲ ಅಧ್ಯಕ್ಷ ರಾಜೇಶ ಭಂಡಾರಿ, ಮುಖಂಡರಾದ ಎಂ.ಜಿ.ನಾಯ್ಕ, ಉಮೇಶ ನಾಯ್ಕ, ಗೋವಿಂದ ನಾಯ್ಕ, ಶಿವಾನಿ ಶಾಂತಾರಾಮ, ಮಂಜುನಾಥ ನಾಯ್ಕ, ಸುಬ್ರಾಯ ನಾಯ್ಕ, ಗಣಪತಿ ನಾಯ್ಕ ಬಿ.ಟಿ., ಸುರೇಶ ಹರಿಕಾಂತ, ವಿವಿಧ ಬೂತ್ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.
Be the first to comment