ಜಿಲ್ಲಾ ಸುದ್ದಿಗಳು
ಬಾಗಲಕೋಟೆ :ರಾಜ್ಯ ಬಾಲಕಾರ್ಮಿಕ ನಿರ್ಮೂಲನೆ ಕ್ರಿಯ ಯೋಜನೆಯಡಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಬಾಗಲಕೋಟೆ ಕಚೇರಿಯಲ್ಲಿ ಖಾಲಿ ಇರುವ ಸಿಬ್ಬಂದಿಗಳನ್ನು ಗೌರವಧನ ಆಧಾರದ ಮೇಲೆ ಗುಮಾಸ್ತರು ಕಂ.ಲೆಕ್ಕಿಗರು ಹಾಗೂ ಕಚೇರಿ ಜವಾನ ಹುದ್ದೆಗೆ ತಲಾ ಒಬ್ಬರಂತೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆಗಸ್ಟ 31 ರೊಳಗಾಗಿ ಸ್ವ-ಅರ್ಜಿ ಫಾರಂನಲ್ಲಿ ಭರ್ತಿ ಮಾಡಿ ಹಾಗೂ ಸಂಬಂಧಿಸಿದ ಅಂಕ ಪಟ್ಟಿಗಳನ್ನು ಹಾಗೂ ಪ್ರಮಾಣ ಪತ್ರಗಳನ್ನು (ಗೇಜಿಟೇಡ್ ಆಫೀಸರ್)ಗಳಿಂದ ದೃಢಿಕರಿಸಿದ ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಖುದ್ದಾಗಿ ಬಂದು ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment