ಹೊನ್ನಾವರ ಕಾಸರಕೋಡ್ ಟೊಂಕ ಸಮೀಪ ವಾಣಿಜ್ಯ ಬಂದರಿನ ಕೂಡು ರಸ್ತೆ ನಿರ್ಮಾಣಕ್ಕೆ ಸ್ಥಳೀಯರ ವಿರೋಧ

ವರದಿ-ಕುಮಾರ್ ನಾಯ್ಕ.ಭಟ್ಕಳ

ಜಿಲ್ಲಾ ಸುದ್ದಿಗಳು 

ಹೊನ್ನಾವರ

ಕಾಸರಕೋಡ ಟೊಂಕ ಸಮೀಪ ನಿರ್ಮಿಸಲು ಉದ್ದೇಶಿಸಿರುವ ವಾಣಿಜ್ಯ ಬಂದರಿನ ಕೂಡು ರಸ್ತೆಯ ನಿರ್ಮಾಣ ಕಾಮಗಾರಿಯ ವಿರುದ್ಧ ಸ್ಥಳೀಯರು ಮಂಗಳವಾರ ಪ್ರತಿಭಟನೆ ನಡೆಸಿದರು. ಗುತ್ತಿಗೆದಾರ ಕಂಪನಿಯು ಕಾಮಗಾರಿ ನಡೆಸದಂತೆ ತಡೆಯುವಲ್ಲಿ ಯಶಸ್ವಿಯಾದರು.

CHETAN KENDULI

ಕೆಲವು ದಿನಗಳ ಹಿಂದೆಯಷ್ಟೇ ಸ್ಥಳೀಯರ ವಿರೋಧದ ನಡುವೆಯೂ ಭಾರಿ ಪೊಲೀಸ್ ಭದ್ರತೆಯಲ್ಲಿ ರಸ್ತೆಗೆ ಅಗತ್ಯವಿರುವ ಜಾಗದ ತೆರವು ಕಾರ್ಯವನ್ನು ಗುತ್ತಿಗೆದಾರ ಕಂಪನಿ ನಡೆಸಿತ್ತು.ಆ ನಂತರ ಬಂದರು ನಿರ್ಮಾಣಕ್ಕೆ ಸಂಬಂಧಿಸಿದ ಕಾಮಗಾರಿ ಸ್ಥಗಿತಗೊಳಿಸಿತ್ತು. ಕಾಮಗಾರಿಗೆ ಸಂಬಂಧಿಸಿದಂತೆ ವಿವಿಧ ಮುಖಂಡರಿಂದ ಆರೋಪ ಮತ್ತು ಪ್ರತ್ಯಾರೋಪಗಳ ಸುರಿಮಳೆಯಾಗಿತ್ತು.

ಕಾಮಗಾರಿ ನಡೆಯುವ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸರ್ವೆ ಕಾರ್ಯ ನಡೆಸಲಾಗಿತ್ತು. ಇದರ ವರದಿಯನ್ನು ಆ.18ರಂದು ಜಿಲ್ಲಾಡಳಿತವು ಹೈಕೋರ್ಟ್‌ಗೆ ಸಲ್ಲಿಸಿತ್ತು. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಗುತ್ತಿಗೆದಾರ ಕಂಪನಿಯು ಮಂಗಳವಾರ ರಸ್ತೆಗೆ ಜಲ್ಲಿ ಹಾಕಿ ಪಕ್ಕಾ ರಸ್ತೆ ನಿರ್ಮಿಸಲು ಮುಂದಾಗಿದೆ. ಸ್ಥಳೀಯರ ವಿರೋಧದಿಂದ ಕಾಮಗಾರಿ ಮತ್ತೊಮ್ಮೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.‘ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬಂದರು ನಿರ್ಮಾಣದಿಂದ ಪರಿಸರಕ್ಕೆ ಹಾನಿಯಾಗುವ ಜೊತೆಗೆ ಜನಜೀವನಕ್ಕೆ ಧಕ್ಕೆಯಾಗಲಿದೆ’ ಎಂದು ಪ್ರತಿಭಟನಾಕಾರರು ಕಾಮಗಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Be the first to comment

Leave a Reply

Your email address will not be published.


*