ಜಿಲ್ಲಾ ಸುದ್ದಿಗಳು
ಬಾಗಲಕೋಟೆ :ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಬರುವ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಲ್ಲಿ ನಿರ್ಲಕ್ಷ ಸಲ್ಲದು ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯೋಜನಾ ಕಾರ್ಯಕ್ರಮಗಳ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಳಿಸಿ ಯೋಜನೆ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು. ವಿಳಂಬಕ್ಕೆ ಅವಕಾಶ ನೀಡಬಾರದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಮಹಿರ್ಷ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ದಿ ನಿಮಗ, ಅಂಬೇಡ್ಕರ ಅಭಿವೃಧ್ದಿ ನಿಗಮ, ಆದಜಾಂಬವ, ತಾಂಡಾ ಅಭಿವೃದ್ದಿ ಹಾಗೂ ಭೋವಿ ಅಭಿವೃದ್ದಿ ನಿಗಮದ ಪ್ರಗತಿ ಕುಂಟಿತಗೊಳ್ಳುತ್ತಿದ್ದು, ನಿಗಮಗಳ ಮಾನಿಟರಿಂಗ್ ಮಾಡಲಿಕ್ಕೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಅವರಿಗೆ ತಿಳಿಸಿದರು.
ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದಡಿ ವಿತರಣೆಯಾಗುತ್ತಿರುವ ಪೌಷ್ಠಿಕ ಆಹಾರದ ಪದಾರ್ಥಗಳ ತೂಕದಲ್ಲಿ ವ್ಯತ್ಯಾಸ ಕಂಡುಬರುತ್ತಿದ್ದು, ಪರೀಕ್ಷಿಸಿ ಪಡೆಯತಕ್ಕದ್ದು, ತೂಕದಲ್ಲಿ ವ್ಯತ್ಯಾಸ ಕಂಡಲ್ಲಿ ಅಂತಹ ಎಂ.ಎಸ್.ಪಿ.ಟಿ.ಸಿಗಳ ಮೇಲೆ ಕ್ರಮಕೈಗೊಳ್ಳುವಂತೆ ಜಿ.ಪಂ ಸಿಇಓ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ ವಿಶೇಷ ಘಟಕ ಯೋಜನೆಯಡಿ ವಿವಿಧ ಇಲಾಖೆಗೆ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯದಡಿ ಒಟ್ಟು 83.91 ಕೋಟಿ ರೂ.ಗಳ ನಿಗದಿಪಡಿಸಿದ ಅನುದಾನಕ್ಕೆ 24.59 ಕೋಟಿ ರೂ.ಗಳ ಬಿಡುಗಡೆಯಾಗಿದ್ದು, ಈ ಪೈಕಿ 13.04 ಕೋಟಿ ರೂ.ಗಳ ಖರ್ಚು ಮಾಡಲಾಗಿದೆ. ಅದೇ ರೀತಿ ಗಿರಿಜನ ಉಪಯೋಜನೆಯಡಿ ನಿಗದಿಪಡಿಸಿದ ಒಟ್ಟು 33.52 ಕೋಟಿ ರೂ.ಗಳ ಅನುದಾನಕ್ಕೆ 13.85 ಕೋಟಿ ರೂ.ಗಳು ಬಿಡುಗಡೆಯಾಗಿದ್ದು, ಈ ಪೈಕಿ 9.19 ಕೋಟಿ ರೂ.ಗಳು ಖರ್ಚು ಮಾಡಲಾಗಿದೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕಿ ಡಾ.ಚೇತನಾ ಪಾಟೀಲ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಹುಲ್‍ಕುಮಾರ ಬಾವಿದಡ್ಡಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮಾಯನಗೌಡರ ಸೇರಿದಂತೆ ಇತರರು ಉಪಸ್ಥಿತರಿದ್ದರು.
Be the first to comment