ರಾಜ್ಯ ಸುದ್ದಿಗಳು
ಮಂಗಳೂರು
ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ವತಿಯಿಂದ ಕೊಣಾಜೆಯಲ್ಲಿರೋ ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಕಾರ್ಯಕ್ರಮ ಉದ್ಘಾಟನೆಗೊಂಡಿತು. ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಸಿ.ಎನ್, ಕಾರ್ಯಕ್ರಮ ಉದ್ಘಾಟಿಸಿದರು. ಇದೇ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಮಂಗಳೂರು ವಿವಿ ಎದುರು ಪ್ರತಿಭಟನೆ ನಡೆಸಿದರು. ಉನ್ನತ ಶಿಕ್ಷಣ ಸಚಿವ್ರು ಮಂಗಳೂರು ವಿವಿಯಲ್ಲಿ ಇಂದು
ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆನ್ನಲ್ಲೇ ಸಿಎಫ್ ಐ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ನೂಕಾಟ ನಡೆಯಿತು.ತದನಂತರಪೊಲೀಸರುಪ್ರತಿಭಟನಾಕಾರರನ್ನುವಶಕ್ಕೆಪಡೆದುಕೊಂಡರು.ಈಕುರಿತುಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಆತುರದಲ್ಲಿ ಮಾಡಲು ಹೊರಟಿದ್ದಾರೆ ಅಂತ ಕೆಲವರು ಹೇಳ್ತಿದ್ದಾರೆ.
ಆದ್ರೆ ಈ ಮಾತು ಸರಿಯಲ್ಲ. ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ಈ ನೀತಿ ಕೇಸರೀಕರಣ ಅನ್ನೋದು ಸುಮ್ಮನೆ. ಈ ವಾದದಲ್ಲಿ ಹುರುಳಿಲ್ಲ. ಇದರಲ್ಲಿ ವಿದ್ಯಾರ್ಥಿಗಳಿಗೆ ವಿರುದ್ಧವಾದ ಅಂಶಗಳಿದ್ರೆ ತೋರಿಸಿ ಎಂದು ಸವಾಲೆಸೆದ್ರು. ಇನ್ನು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿ ಈಗಿನ ವಿಷಯಗಳನ್ನೇ ಬಳಸುತ್ತೇವೆ. ಆದ್ರೆ ವಿದ್ಯಾರ್ಥಿಗಳ ಆಯ್ಕೆಗೆ ಪ್ರತ್ಯೇಕವಾದ ಅವಕಾಶವಿದೆ. ಎನ್ಇಪಿಯನ್ನು ಅನುಷ್ಠಾನ ಮಾಡಲು ಯೋಜನೆ ರೂಪಿಸಲಾಗಿದೆ.
ಆತುರದಲ್ಲಿ ಶಿಕ್ಷಣ ನೀತಿ ಅನುಷ್ಠಾನಗೊಳಿಸಲಾಗಿಲ್ಲ. ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಶಿಕ್ಷಣ ಕ್ಷೇತ್ರದ ಮೂಲತತ್ವಗಳಲ್ಲಿ ಸುಧಾರಣೆ ಮಾಡಲಾಗುತ್ತಿದೆ. ಕಲಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಆಯ್ಕೆಗಳನ್ನು ನೀಡಲಾಗಿದೆ. ಅಂತರ್ ಶಿಸ್ತು ಪಾಲನೆಗೆ ಆದ್ಯತೆ ನೀಡಲಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿಬದಲಾವಣೆ ಇಲ್ಲಾಂದ್ರೆ ನಿಂತ ನೀರಾಗುತ್ತದೆ. ನಮ್ಮ ವಿದ್ಯಾರ್ಥಿಗಳು ವಿಶ್ವಮಟ್ಟದಲ್ಲಿ ಸ್ಪರ್ಧೆ ಮಾಡಬೇಕಾಗಿದೆ.
ನರ್ಸರಿಯಿಂದ ಉನ್ನತ ಶಿಕ್ಷಣದವರೆಗೆ ಎನ್ಇಪಿಯಲ್ಲಿ ಸುಧಾರಣೆಯಾಗಲಿದೆ.ಚ್ಈ ಸುಧಾರಣೆ ವಿಶ್ವ ವ್ಯಾಪ್ತಿಯಲ್ಲಿ ಸಾಬೀತಾಗಿರುವಂತಹದ್ದು. ಯಾವುದೇ ವಿದ್ಯಾರ್ಥಿಗಳ ವಿರುದ್ಧವಾಗಿರುವಂತಹದ್ದು ಏನೂ ಇಲ್ಲ. ಮುಂದಿನ ವರ್ಷಗಳಲ್ಲಿ ಆಡಳಿತಾತ್ಮಕ ಸುಧಾರಣೆ ಕ್ರಮಗಳಾಗಲಿವೆ ಎಂದರು.
Be the first to comment