ಜಿಲ್ಲಾ ಸುದ್ದಿಗಳು
ಯಲ್ಲಾಪುರ
ಲೋಕೋಪಯೋಗಿ ಇಲಾಖೆ ಸಚಿವರಾದ ಸಿ.ಸಿ ಪಾಟೀಲ್ ಅವರು ಇಂದು ತಾಲೂಕಿನ ಕಳಚೆ ಭಾಗಕ್ಕೆ ಭೇಟಿ ನೀಡಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ನಡೆಸಿದರು. ನಂತರ ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಸಂತ್ರಸ್ತರ ಅಹವಾಲನ್ನು ಸ್ವೀಕರಿಸಿದರು.
ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಈ ಭಾಗದಲ್ಲಿ ಉಂಟಾದ ಹಾನಿಯ ಬಗ್ಗೆ ಸಂಪೂರ್ಣವಾಗಿ ವಿವರಿಸಿದರು ಹಾಗೂ ಹೆಚ್ಚಿನ ಅನುದಾನವನ್ನು ಮಂಜೂರಿ ಮಾಡುವಂತೆ ಮನವಿ ಮಾಡಿದ್ದಾರೆ.
ಇದಕ್ಕೆ ಸಕಾರಾತ್ಮಕ ಸ್ಪಂದಿಸಿದ ಸಚಿವರು ಮುಖ್ಯಮಂತ್ರಿ ಕೂಡ ಈ ಭಾಗದ ಅಭಿವೃದ್ಧಿಯ ಕುರಿತು ಗಮನ ಹರಿಸಿದ್ದಾರೆ. ನೀವು ಹೇಳಿದ ಅಭಿವೃದ್ಧಿ ಕಾರ್ಯವನ್ನು ಮಾಡುತ್ತೇವೆ ಎಂದು ತಿಳಿಸಿದ್ದಾರೆ.
Be the first to comment