ಜಿಲ್ಲಾ ಸುದ್ದಿಗಳು
ಬಾಗಲಕೋಟೆ : ಜಿಲ್ಲೆಯಲ್ಲಿ ಸೆಪ್ಟೆಂಬರ 3 ರಂದು ನಗರ ಸ್ಥಳೀಯ ಸಂಸ್ಥೆಗಳಿಗೆ ಜರುಗಲಿರುವ ಉಪ ಚುನಾವಣೆಗೆ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವಾರ್ಡಿನ ವ್ಯಾಪ್ತಿಯಲ್ಲಿರುವ ಎಲ್ಲ ಸರಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗವು ವೇತನ ಸಹಿತ ಸಾರ್ವತ್ರಿಕ ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಜಿಲ್ಲೆಯ ಮುಧೋಳ ನಗರಸಭೆ, ಬೀಳಗಿ ಪಟ್ಟಣ ಪಂಚಾಯತ, ಮಹಾಲಿಂಗಪೂರ ಮತ್ತು ತೇರದಾಳ ಪುರಸಭೆ ವ್ಯಾಪ್ತಿಯಲ್ಲಿ ಬರುವವರಿಗೆ ಮಾತ್ರ ಈ ಆದೇಶ ಅನ್ವಯಿಸುತ್ತದೆ. ಈ ರಜೆ ತುರ್ತು ಸೇವೆಗಳ ಮೇಲೆ ಇರುವ ಸರಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡತಕ್ಕದ್ದು. ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲ ಸರಕಾರಿ ನೌಕರರುಗಳು ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
Be the first to comment