ರಾಜ್ಯ ಸುದ್ದಿಗಳು
ದೇವನಹಳ್ಳಿ
ಮುಂದಿನ ಯಾವುದೇ ಚುನಾವಣೆಯಲ್ಲಿ ಯಾರೇ ಅಭ್ಯರ್ಥಿಗಳಾದರೂ ಕಾಂಗ್ರೆಸ್ ಪಕ್ಷದ ಗೆಲುವು ಒಂದೇ ಗುರಿಯಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪ್ರಸನ್ನಕುಮಾರ್ ತಿಳಿಸಿದರು.ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಕುರಿತು ಮಾತನಾಡಿದರು. ಕಾಂಗ್ರೆಸ್ ಪಕ್ಷದ ಶಾಸಕರು ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಎರಡು ಅವಧಿಗೆ ಶಾಸಕರನ್ನು ಕಳೆದುಕೊಂಡಿದ್ದೇವೆ. ಈ ಬಾರಿ ಶತಾಯಗತಾಯ ಯಾರೇ ಅಭ್ಯರ್ಥಿಯಾಗಲೀ ಅಧಿಕಾರದ ಚುಕ್ಕಾಣಿ ಹಿಡಿಯಲು ಸಂಪೂರ್ಣ ಬೆಂಬಲ ನೀಡಿ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವುದು ಖಚಿತ ಎಂದು ಭವಿಷ್ಯ ನುಡಿದರು.
ಮಾಜಿ ಶಾಸಕ ಕೆ.ವೆಂಕಟಸ್ವಾಮಿ ಮಾತನಾಡಿ, ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲಿ ಕಾಂಗ್ರೆಸ್ ಭದ್ರಕೋಟೆ ಆಗಲಿದೆ. ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಳ್ಳಲು ಕ್ಷೇತ್ರದ ಜನರು ಕಾತುರರಾಗಿದ್ದಾರೆ. ಸ್ಥಳಿಯ ರಾಗಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಒತ್ತು ನೀಡಿ ಪಕ್ಷವನ್ನು ಮತ್ತೆ ಮರುಜೀವ ನೀಡಲು ಎಲ್ಲಾ ಮುಖಂಡರು, ಕಾರ್ಯಕರ್ತರು ಉತ್ಸಾಹಿಗಳಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.ಈ ವೇಳೆಯಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಸಿ.ಜಗನ್ನಾಥ್, ಕೆಪಿಸಿಸಿ ಸದಸ್ಯ ಚೇತನ್ ಗೌಡ, ಖಾದಿ ಬೋರ್ಡ್ ಅಧ್ಯಕ್ಷ ನಾಗೇಗೌಡ, ಇತರರು ಇದ್ದರು.
Be the first to comment