ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ: ಆದರೆ, ಈ ಷರತ್ತುಗಳು ಅನ್ವಯ

ವರದಿ-ಕುಮಾರ್ ನಾಯ್ಕ.ಭಟ್ಕಳ

ರಾಜ್ಯ ಸುದ್ದಿಗಳು 

ಬೆಂಗಳೂರು

ಹಿಂದೂಗಳ, ಸಂಘಸAಸ್ಥೆಗಳ ಒತ್ತಡಕ್ಕೆ ಸರ್ಕಾರ ಮಣಿದಿದೆ. ಕೊನೆಗೂ ಅಳೆದು ತೂಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಸರಕಾರ ಷರತ್ತುಬದ್ಧ ಅನುಮತಿ ನೀಡಿದೆ. 3 ದಿನಗಳ ಮಟ್ಟಿಗೆ ಗಣೇಶೋತ್ಸವ ಆಚರಿಸಲು ಇದೀಗ ಅನುಮತಿ ಸಿಕ್ಕಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

CHETAN KENDULI

ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಸಿಕ್ಕಿದೆಯಾದರೂ., ಎಲ್ಲೆಂದರಲ್ಲಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ. ಬೀದಿಗೆ ಒಂದರoತೆ, ಊರಿಗೆ ಒಂದರoತೆ ಗಣೇಶ ಪ್ರತಿಷ್ಠಾಪಿಸುವಂತಿಲ್ಲ ಎಂದು ಕಟ್ಟುನಿಟ್ಟಾಗಿ ತಿಳಿಸಲಾಗಿದೆ. ಸರಳವಾಗಿ ಗಣೇಶ ಉತ್ಸವ ಆಚರಣೆ ಮಾಡಬೇಕು, ಊರಿಗೆ ಇಂತಿಷ್ಟೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಷರತ್ತು ವಿಧಿಸಲಾಗಿದೆ.
ಅಲ್ಲದೆ, ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯವಾಗಿದೆ. ಬಿಬಿಎಂಪಿ, ಜಿಲ್ಲಾಡಳಿತ, ಅಥವಾ ಸಂಬoಧಿಸಿದ ತಾಲೂಕಾಡಳಿತ ಅನುಮತಿ ಪಡೆಯಲೇಬೇಕು ಎಂದು ಮಾಹಿತಿ ನೀಡಲಾಗಿದೆ.

ಇನ್ನೊಂದು ಅಂಶ ಏನೆಂದರೆ, ಜಿಲ್ಲಾಡಳಿತಗಳು ಸೂಚಿಸುವ ಸ್ಥಳಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಇದೆ. ಆದರೆ, ಎಲ್ಲೂ ವೇದಿಕೆ ಕಾರ್ಯಕ್ರಮಗಳಿಗೆ , ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ ಎಂದು ಸಿಎಂ ತಿಳಿಸಿದ್ದಾರೆ. ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

Be the first to comment

Leave a Reply

Your email address will not be published.


*