ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 600 ಕ್ಕಿಂತ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ, ಪದಕ ವಿತರಣೆ ಹಾಗೂ ಸನ್ಮಾನ ಸಮಾರಂಭ

ವರದಿ: ಶರಣಪ್ಪ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

 

ಬಾಗಲಕೋಟೆ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದಡಿಯಲ್ಲಿ ನಡೆಯುತ್ತಿರುವ ವಿವಿಧ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 600 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಂಘದ ಕಾರ್ಯಾಧ್ಯಕ್ಷರು ಹಾಗೂ ಶಾಸಕರಾದ ಡಾ.ವೀರಣ್ಣ ಚರಂತಿಮಠರವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ, ಪದಕ ವಿತರಣೆ ಹಾಗೂ ಅಂಕಗಳನ್ನು ಪಡೆಯುವಲ್ಲಿ MCQ ಸಾಹಿತ್ಯ ರಚನೆ ಮಾಡಿದ ವಿಷಯ ಸಂಪನ್ಮೂಲ ಶಿಕ್ಷಕರಿಗೆ ಸನ್ಮಾನ ಸಮಾರಂಭ ನಡೆಯಿತು.

ಸಂಘದ ಮಿನಿ ಆಡಿಟೋರಿಯಂನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಒಟ್ಟು 17 ವಿದ್ಯಾರ್ಥಿಗಳು 600 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಮಕ್ಕಳಿಗೆ ಪ್ರಶಸ್ತಿ,ಪದಕ ವಿತರಿಸಿ ಸನ್ಮಾನ ಮಾಡಿ ಇದು ಶಿಕ್ಷಕರಿಗೂ ಮತ್ತು ನಮ್ಮ ಸಂಸ್ಥೆಗೂ ಹೆಮ್ಮೆಯ ವಿಷಯ ಎಂದು ಕಾರ್ಯಧ್ಯಕ್ಷರು ಸಂತಸ ವ್ಯಕ್ತಪಡಿಸಿದರು.ಕೋವಿಡ್ ಹಿನ್ನೆಲೆಯಲ್ಲಿ ಬದಲಾದ ಪರೀಕ್ಷಾ ಪದ್ಧತಿಗೆ ಮಕ್ಕಳನ್ನು ತಯಾರಿಗೊಳಿಸುವಲ್ಲಿ ಅತಿ ಕಡಿಮೆ ಅವಧಿಯಲ್ಲಿ ಎಲ್ಲ ವಿಷಯಗಳ 800 MCQ ಪ್ರಶ್ನೋತ್ತರಗಳನ್ನು ಸಂಘದ ವಿಷಯ ಸಂಪನ್ಮೂಲ ಶಿಕ್ಷಕರ ಮೂಲಕ ಶಾಲಾ ಆಡಳಿತ ಮಂಡಳಿಯ ಕಾರ್ಯಧ್ಯಕ್ಷರಾದ ಮಹಾಂತೇಶ ಶೆಟ್ಟರ ಸಾಹಿತ್ಯ ರಚನೆಮಾಡಿ ಸಂಘದಿಂದಲೆ ಮುದ್ರಣಮಾಡಿ ಎಲ್ಲ ಮಕ್ಕಳಿಗೂ ಉಚಿತವಾಗಿ ಹಂಚಿದ ಮಹತ್ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಎನ್ ಅಥಣಿ, ವೈದ್ಯಕೀಯ ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ಎ.ಎಮ್. ಸಜ್ಜನ್,ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ಗುರುಬಸವ ಸೂಳಿಭಾವಿ, ಶಾಲಾ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ಮಹಾಂತೇಶ ಶೆಟ್ಟರ,ಸಂಘದ ಗೌರವಾನ್ವಿತ ಸದಸ್ಯರು,ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀಶೈಲ ಬಿರಾದಾರ, ಜಿಲ್ಲಾ ಅಕ್ಷರ ದಾಸೋಹದ ಅಧಿಕಾರಿ ಎನ್ ವಾಯ್ ಕುಂದರಗಿ,ಕ್ಷೇತ್ರ ಶಿಕ್ಷಣಾಧಿಕಾರಿ ಪಿ ಬಿ ಹಿರೇಮಠ, ತಾಲೂಕಾ ಅಧಿಕಾರಿ ಎ ಎ ರಾಮತೀರ್ಥ, ಸಂಸ್ಥೆಯ ಎಲ್ಲ ಮೇಲಾಧಿಕಾರಿಗಳು, ಪ್ರಾಚಾರ್ಯರು ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*