ಜಿಲ್ಲಾ ಸುದ್ದಿಗಳು
ಶಿರಸಿ
ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಜಿಲ್ಲೆ ಮತ್ತು ರಾಜ್ಯದಲ್ಲಿ ಅರಣ್ಯವಾಸಿಪರ ಹೋರಾಟಕ್ಕೆ ಸಪ್ಟೆಂಬರ್ ೧೨ ಕ್ಕೆ ೩೦ ವರ್ಷ ಮುಕ್ತಾಯಗೊಳ್ಳುವ ಸಂದರ್ಭದಲ್ಲಿ ‘೩೦ ವರ್ಷ ಅರಣ್ಯ ಭೂಮಿ ಹೊರಾಟ’-ಒಂದು ಅವಲೋಕನ ಎಂಬ ಕಾರ್ಯಕ್ರಮವನ್ನ ಶಿರಸಿಯಲ್ಲಿ ಸಂಘಟಿಸಲಾಗಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.
ಅಂದು ಮುಂಜಾನೆ ೧೦:೩೦ ಕ್ಕೆ ಶಿರಸಿಯ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರ ವೇದಿಕೆಯ ಕಾರ್ಯಾಲಯದಲ್ಲಿ ಸಂಘಟಿಸಲಾಗಿದೆ ಎಂದು ಅವರು ತಿಳಿಸಿದರು.
ಉತ್ತರ ಕನ್ನಡ ಜಿಲ್ಲೆ ಮತ್ತು ಕರ್ನಾಟಕದ ವಿವಿಧ ೧೬ ಜಿಲ್ಲೆಗಳಲ್ಲಿ ಅರಣ್ಯವಾಸಿಗಳ ಪರ ನಿರಂತರ ೩೦ ವರ್ಷ ಸಂಘಟನೆ, ಹೋರಾಟ, ಆಂದೋಲನ ಹಾಗೂ ಸುಫ್ರಿಂ ಕೋರ್ಟ ಮತ್ತು ಹೈ ಕೋರ್ಟಗಳಲ್ಲಿ ಅರಣ್ಯವಾಸಿಗಳ ಪರವಾಗಿ ೩೦ ವರ್ಷ ಸಂಘಟಿಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
Be the first to comment