ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉದ್ಘಾಟನೆ

ವರದಿ ಗುರುಮೂರ್ತಿ ಬೂದಿಗೆರೆ

ರಾಜ್ಯ ಸುದ್ದಿಗಳು 

ದೇವನಹಳ್ಳಿ:ಕ್ಷೇತ್ರ ಅಭಿವೃದ್ಧಿ ಹೊಂದಬೇಕಾದರೆ ಮುಖಂಡರು ಪಕ್ಷಾತೀತವಾಗಿ ಜಾತ್ಯಾತೀತವಾಗಿ ಶ್ರಮಿಸಿದಾಗ ಮಾತ್ರ ಸಾಧ್ಯ ಇದಕ್ಕೆ ಉದಾಹರಣೆ ಪಟ್ಟಣದ ಪುಟ್ಟಪ್ಪನ ಬೀದಿಯಲ್ಲಿ ನೂತನವಾಗಿ ನಿರ್ಮಾಣವಾದ ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

CHETAN KENDULI

ಅವರು ದೇವನಹಳ್ಳಿ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿನ ಪುಟ್ಟಪ್ಪನಗುಡಿ ಬೀದಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ಮಾಡಿ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಕೋವಿಡ್ ಮಹಾಮಾರಿ ಒಕ್ಕರಿಸಿದ್ದರಿಂದ ಶಾಲೆಗಳ ಪ್ರಾರಂಭವಾಗದೇ ಮಕ್ಕಳ ಶೈಕ್ಷಣಿಕ ಕುಂಟಿತಕ್ಕೆ ಕಾರಣವಾಗಿದೆ. ಇಂದಿನಿಂದ 6 ರಿಂದ 8 ನೇ ತರಗತಿ ಪ್ರಾರಂಭಿಸಲು ಸರ್ಕಾರ ಹಸಿರು ನಿಶಾನೆ ತೋರಿದ್ದು ಇದಕ್ಕೆ ಪೋಷಕರು ಸಹಕರಿಸಿ ತಮ್ಮ ಮಕ್ಕಳನ್ನು ಶಾಲೆಗೆ ಕೋವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಕಳುಹಿಸಬೇಕು ಸರ್ಕಾರದ ಮಾರ್ಗಸೂಚಿಯನ್ನು ಅನುಸರಿಸಬೇಕು ಹಾಗೂ ಯಾವ ಗ್ರಾಮದಲ್ಲಿ ಸಮಸ್ಯೆ ಇದೆ ನನ್ನ ಗಮನಕ್ಕೆ ತಿಳಿಸಿ ಎಂದರು.

ನೂತನ ಕಟ್ಟಡಕ್ಕೆ ಸರ್ಕಾರದಿಂದ 23 ಲಕ್ಷ ರೂಗಳು ಬಿಡುಗಡೆಯಾಗಿ ಕಳೆದ 8 ತಿಂಗಳ ಹಿಂದೆ ಗುದ್ದಲಿ ಪೂಜೆ ನೆರವೇರಿತ್ತು ಇಂದು 6 ರಿಂದ 8 ನೇ ತರಗತಿಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆ ಎರಡು ಕೊಠಡಿಗಳನ್ನು ಮಕ್ಕಳ ಕಲಿಕೆಗೆ ಉದ್ಘಾಟಿಸಲಾಯಿತು ಎಂದು ಕೆಪಿಸಿಸಿ ಸದಸ್ಯ ಹಾಗೂ ಮುಖಂಡ ಚಿನ್ನಪ್ಪ ತಿಳಿಸಿದರು.

ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷೆ ರೇಖಾ ವೇಣುಗೋಪಾಲ್, ಉಪಾಧ್ಯಕ್ಷೆ ಪುಷ್ಪಲತಾ ಲಕ್ಷ್ಮೀನಾರಾಯಣ್, ಸದಸ್ಯ ರವೀಂದ್ರ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಮುನೇಗೌಡ,ಗೋಪಿ, ಕುಮಾರ್, ಕಾಂಗ್ರೆಸ್ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಜಗನ್ನಾಥ್, ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷೆ ಅನಂತಕುಮಾರಿ, ಟೌನ್ ಅಧ್ಯಕ್ಷ ಮುನಿನಂಜಪ್ಪ, ತಾಲೂಕು ಯೂತ್ ಜೆಡಿಎಸ್ ಅಧ್ಯಕ್ಷ ಭರತ್,ಇನ್ನು ಅನೇಕ ಮುಖಂಡರು ಜನಪ್ರತಿನಿಧಿಗಳು, ಅಧಿಕಾರಿ ವೃಂದ ಹಾಜರಿದ್ದರು.

Be the first to comment

Leave a Reply

Your email address will not be published.


*