ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಧರಣಿ ಜಿಲ್ಲಾಡಳಿತ ಮುಂಭಾಗದಲ್ಲಿ ಪ್ರತಿಭಟನೆ ಪ್ರವರ್ಗ-2ಎ ಮೀಸಲಾತಿ ಪಟ್ಟಿಗೆ ಪ್ರಬಲ ಜಾತಿಗಳನ್ನು ಸೇರಿಸದಂತೆ ಒತ್ತಾಯ

ವರದಿ: ಹೈದರ್ ಸಾಬ್, ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ

ಪ್ರವರ್ಗ-2ಎ ಮೀಸಲಾತಿ ಪಟ್ಟಿಗೆ ಯಾವುದೇ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಎಲ್ಲಾ ರೀತಿಯಿಂದಲೂ ಮುಂದುವರೆದಿರುವ ಪ್ರಬಲ ಜಾತಿಗಳನ್ನು ಸೇರಿಸಬಾರದು ಮತ್ತು ವಿವಿಧ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಒಕ್ಕೂಟದ ಪದಾಧಿಕಾರಿಗಳು ಮತ್ತು ಹಿಂದುಳಿದ ವರ್ಗಗಳ ಮುಖಂಡರು ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸುವುದರ ಮೂಲಕ ಸರಕಾರಕ್ಕೆ ಒತ್ತಾಯಿಸಿದರು.

CHETAN KENDULI

ತುರವೇಕರೆ ವಿ.ಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್ ಮಾತನಾಡಿ, ಸರಕಾರ ಹೆಚ್.ಕಾಂತರಾಜು ಆಯೋಗದ ನೇತೃತ್ವದಲ್ಲಿ ನಡೆದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿವಾರು ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಬೇಕು. ಹಿಂದುಳಿದ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಮೀಸಲಾತಿ ನೀಡಬೇಕು. ದೇವರಾಜು ಅರಸು ಅಭಿವೃದ್ಧಿ ನಿಗಮದಿಂದ ಕೈಗೊಂಡಿರುವ ಚೈತನ್ಯ ಸ್ವಯಂ ಉದ್ಯೋಗ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಚೈತನ್ಯ ಸಬ್ಸಿಡಿ ಕಂ ಸಾಫ್ಟ್ ಲೋನ್ ಯೋಜನೆ, ಕಿರುಸಾಲ ಯೋಜನೆ, ಸಾಂಪ್ರದಾಯಿಕ ಕುಶಲ ಕರ್ಮಿಗಳು ಮತ್ತು ವೃತ್ತಿ ಕಸುಬುದಾರರಿಗೆ ಸಾಲ ಸಹಾಯಧನ, ಗಂಗಾ ಕಲ್ಯಾಣ ಸೇರಿದಂತೆ ಹಲವು ಇಲಾಖೆ ಕಾರ್ಯಕ್ರಮಗಳು ಸ್ಥಗಿತಗೊಂಡಿದ್ದು, ಕೂಡಲೇ ಈ ಕಾರ್ಯಕ್ರಮಗಳಿಗೆ ಹಣ ಬಿಡುಗಡೆಗೊಳಿಸಬೇಕು. ಹಿಂದುಳಿದ ವರ್ಗಗಳ ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಲು ಕ್ರಮವಹಿಸಿರುವುದಿಲ್ಲ. ಸರಕಾರ ಶೀಘ್ರ ಕ್ರಮವಹಿಸಿ ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಬೇಕು. ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಗಳು ಹಾಗೂ ವಿದ್ಯಾರ್ಥಿಗಳಿಗೆ ಸಿಗಬೇಕಾದ ನ್ಯಾಯಾಯುತ ಕಾರ್ಯಕ್ರಮಗಳಿಗೆ ಹಣ ಬಿಡುಗಡೆಗೊಳಿಸಿ ಶೀಘ್ರವಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್.ವೆಂಕಟರಾಮಯ್ಯ ಸೇರಿದಂತೆ ಹಲವಾರು ಮಾತನಾಡಿದರು. ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳು, ಆಯೋಗದ ಮಾಜಿ ಸದಸ್ಯ ಜಿ.ಡಿ.ಗೋಪಾಲ್, ಬಿಎಂಟಿಸಿ ಅಧ್ಯಕ್ಷ ನಾಗರಾಜ್ ಯಾದವ್, ಪ್ರೋ.ನರಸಿಂಹಯ್ಯ, ಮಡಿವಾಳ ಅಧ್ಯಕ್ಷ ನಂಜಪ್ಪ, ಕುರುಬರ ಸಂಘದ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಕೃಷ್ಣಮೂರ್ತಿ, ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಕೃಷ್ಣಮೂರ್ತಿ, ಅಹಲ್ಯಬಾಯಿ ಮಹಿಳಾ ಸಂಘದ ಅಧ್ಯಕ್ಷೆ ಪ್ರಭಾವತಿ, ದೇವನಹಳ್ಳಿ ಜೆಡಿಎಸ್ ಪ್ರಧಾನಕಾರ್ಯದರ್ಶಿ ಜಿ.ಎ.ರವೀಂದ್ರ, ಪುರಸಭಾಧ್ಯಕ್ಷೆ ರೇಖಾವೇಣುಗೋಪಾಲ್, ಕುಂದಾಣ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಕೋದಂಡರಾಮ್, ಸಮಾಜದ ಮುಖಂಡರು, ಮತ್ತಿತರರು ಇದ್ದರು.

Be the first to comment

Leave a Reply

Your email address will not be published.


*