ರಾಜ್ಯ ಸುದ್ದಿಗಳು
ದೇವನಹಳ್ಳಿ
ಸೆ.25, 26ರಂದು ಬಿಜೆಪಿ ಕಾರ್ಮಿಕ ಪ್ರಕೋಷ್ಠದಿಂದ ರಾಜ್ಯಮಟ್ಟದ ಕಾರ್ಯಗಾರವನ್ನು ಪಟ್ಟಣದ ಪಾರಿವಾಟಗುಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ರಾಜ್ಯಾಧ್ಯಕ್ಷ ಬ್ಯಾಡರಂಗೇಗೌಡ ತಿಳಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಮ್ಮ ರಾಜ್ಯದಲ್ಲಿ 24 ಅಸಂಘಟಿತ ಪ್ರಕೋಷ್ಠಗಳಿವೆ. 310 ಮಂಡಲಗಳಿದ್ದು, ಪಕ್ಷದಲ್ಲಿ ಎಲ್ಲರೂ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಶಾಸಕರುಗಳು, ಮಂತ್ರಿಗಳು ಎಲ್ಲರೂ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 6 ಮಂಡಲಗಳ ಸಮಿತಿ ರಚನೆಯಾಗಿದೆ. ತಾಲೂಕಿನಲ್ಲಿಯೂ ಸಹ ಇದೆ. ರಾಜ್ಯದ 30 ಕಂದಾಯ ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರುಗಳ ಜಿಲ್ಲಾ ಪ್ರಕೋಷ್ಠ ಅಧ್ಯಕ್ಷರುಗಳ ಮುಖಾಂತರ ಅಸಂಘಟಿತ ಕಾರ್ಮಿಕರನ್ನು ಸಂಘಟಿಸಲು ರಾಜ್ಯದಲ್ಲಿ ಶೇ.50ರಷ್ಟು ಜನಸಂಖ್ಯೆ ಇದೆ. ಅಸಂಘಟಿತ ಕಾರ್ಮಿಕರು ಇದ್ದಾರೆ. ಬೀದಿ ವ್ಯಾಪಾರಿಗಳು, ಕಟ್ಟಡ ಕಾರ್ಮಿಕರು, ಚಮ್ಮಾರ, ಕಮ್ಮಾರ, ಎಲೆಕ್ಟ್ರೀಷಿಯನ್, ಎಲೆಕ್ಟ್ರೀಕಲ್, ಅಂಗಡಿಗಳಲ್ಲಿ ಪಟ್ಟಣ ಕಟ್ಟುವವರು, ಹೋಟೆಲ್‌ಗಳಲ್ಲಿ, ವಿಮಾನ ನಿಲ್ದಾಣಗಳಲ್ಲಿ ಕಾರ್ಮಿಕರು ಇರುತ್ತಾರೆ. ಅಂತಹವರನ್ನು ಗುರ್ತಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕಾದ ಪ್ರಯತ್ನ ಮಾಡಬೇಕು. ಚದುರಿರುವ ಕಾರ್ಮಿಕರನ್ನು ಒಗ್ಗೂಡಿಸಿಕೊಂಡು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವಂತಾಗಬೇಕು. ವಿಶೇಷವಾಗಿ ತಾಲೂಕು ಸಂಚಾಲಕ ಸಮಿತಿ ರಚನೆಯಲ್ಲಿ 10 ಜನ ಸದಸ್ಯರನ್ನು ನೇಮಿಸಲಾಗಿರುತ್ತದೆ.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 1200ಕೋಟಿರೂ. ಬಜೆಟ್ ಅನ್ನು ಕೊರೊನಾ ಸಂಕಷ್ಟದಲ್ಲಿ ಘೋಷಿಸಲಾಗಿತ್ತು. ಅಸಂಘಟಿತ ಕಾರ್ಮಿಕ ವಲಯಕ್ಕೆ 650ಕೋಟಿರೂ. ಬಿಡುಗಡೆ ಮಾಡಿದ್ದಾರೆ. ರಾಜ್ಯಮಟ್ಟದ ಕಾರ್ಯಗಾರದಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಗುತ್ತದೆ. ಸಂಘಟನೆಯನ್ನು ಯಾವ ರೀತಿ ತೆಗೆದುಕೊಂಡು ಹೋಗಬೇಕು ಎಂಬುವುದರ ಮಾಹಿತಿ ಪಡೆಯಲು ಕಾರ್ಯಗಾರ ಸಹಕಾರಿಯಾಗಲಿದೆ. ಸೆ.25ಮತ್ತು 26ರಂದು ನಡೆಯುವ ಎರಡು ದಿನದ ಕಾರ್ಯಗಾರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು, ಕಾರ್ಯಕರ್ತರು ಭಾಗವಹಿಸುವಂತಾಗಬೇಕು. ಸ್ಥಳೀಯ ಬಿಜೆಪಿ ಮುಖಂಡರನ್ನು ಒಳಗೊಂಡಂತೆ ಪಕ್ಷವನ್ನು ಸದೃಢಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ರಾಜ್ಯಾಧ್ಯಕ್ಷ ಬ್ಯಾಡರಂಗೇಗೌಡ ಅವರನ್ನು ದೇವನಹಳ್ಳಿ ವಿಧಾನಸಭಾಕ್ಷೇತ್ರದ ಬಿಜೆಪಿ ಮುಖಂಡರು ಅಭಿನಂದಿಸಿದರು.
ಈ ವೇಳೆಯಲ್ಲಿ ಜಿಲ್ಲಾ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಸಂಚಾಲಕ ಎಲ್.ಎನ್.ಅಂಬರೀಶ್‌ಗೌಡ, ಮಾಜಿ ಶಾಸಕ ಜಿ.ಚಂದ್ರಣ್ಣ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಎಂ.ಆರ್.ರವಿಕುಮಾರ್, ಚಿಕ್ಕಬಳ್ಳಾಪುರ ಜಿಲ್ಲಾ ಪ್ರಕೋಷ್ಠ ಕಾರ್ಮಿಕ ಘಟಕದ ಕಾರ್ಯದರ್ಶಿ ವೆಂಕಟೇಶ್, ಕಾನೂನು ಪ್ರಕೋಷ್ಠದ ತಾಲೂಕು ಅಧ್ಯಕ್ಷ ಡಿ.ಸಿ.ನಾರಾಯಣಸ್ವಾಮಿ, ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.
Be the first to comment