ರಾಜ್ಯ ಸುದ್ದಿಗಳು
ಬೆಂಗಳೂರು
ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಆರೋಡಿ ಗ್ರಾಮ ಪಂಚಾಯತಿಯ ಮುಂಭಾಗದಲ್ಲಿ ಇಂದು ಆರೂಡಿ ಗ್ರಾಮಸ್ಥರು ಪರಿಸರ ಉಳಿಸುವ ಕುರಿತಾಗಿ ಕಂದಾಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು.
ಆರೋಡಿ ಗ್ರಾಮದ ಹೊರವಲಯದಲ್ಲಿರುವ ಗೋಮಾಳ ಜಾಗವನ್ನು ಊರಿನ ಕೆಲವು ಪ್ರಭಾವಿ ವ್ಯಕ್ತಿಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯ ಸರ್ಕಾರ ಹಾಗೂ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ಸ್ಥಳೀಯ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ರಾಜಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದ ಖ್ಯಾತ ಚಲನಚಿತ್ರ ನಟ ಟೆನ್ನಿಸ್ ಕೃಷ್ಣ ರವರು ಮಾತನಾಡಿ ಪರಿಸರ ಪ್ರತಿಜೀವಿಗೂ ಅವಶ್ಯಕವಾಗಿದೆ ಇದನ್ನು ಉಳಿಸುವ ಬೆಳೆಸುವ ಕಾರ್ಯ ಸರ್ಕಾರ ಮಾಡಬೇಕಾಗಿದೆ ಒಂದು ವೇಳೆ ಸ್ಥಳೀಯ ಸರ್ಕಾರ ಅಥವಾ ಸ್ಥಳೀಯ ಸರ್ಕಾರಿ ಅಧಿಕಾರಿಗಳು ಇದರ ಕುರಿತಾಗಿ ಗಮನಹರಿಸದೆ ಇದ್ದ ಪಕ್ಷದಲ್ಲಿ ಸಿನಿಮಾರಂಗದ ಹಲವು ಪ್ರಮುಖ ರೊಂದಿಗೆ ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದ ಪ್ರತಿಭಟನೆಯನ್ನು ಕೈಗೊಳ್ಳುವುದಾಗಿ ಸ್ಥಳೀಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
Be the first to comment