ಬಿಲ್ ಮಾಡಿಕೊಡಲು ಲಂಚ ಇಬ್ಬರ ಬಂಧನ

ವರದಿ-ಸ್ಪೂರ್ತಿ ಎನ್ ಶೇಟ್

ಜಿಲ್ಲಾ ಸುದ್ದಿಗಳು 

ಶಿರಸಿ

ಕಟ್ಟಡ ನಿರ್ಮಿಸಿದ್ದ ಗುತ್ತಿಗೆದಾರನಿಗೆ ಬಿಲ್ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ನಗರದ ಜಿಲ್ಲಾ ಪಂಜಾಯಿತಿ ಕಾರ್ಯಾಲಯದಲ್ಲಿ ಎ.ಸಿ.ಬಿ ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.

CHETAN KENDULI

ಪ್ರಥಮ ದರ್ಚೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯದುನಂದನ್ ಹಾಗೂ ಗುತ್ತಿಗೆ ಆಧಾರದ ಮೇಲೆ ಕೆಲಸದಲ್ಲಿದ್ದ ಸುಬ್ರಹ್ಮಣ ಬಂಧಿತ ಆರೋಪಿಗಳು. ಇವರನ್ನು ಶಿವಮೊಗ್ಗದ ಸುನೀಲ್ ಎಂಬ ಗುತ್ತಿಗೆದಾರನಿಂದ 12 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ.

ಗುತ್ತಿಗೆದಾರನಿಗೆ 4 ಲಕ್ಷ ರೂ.ಗಳ ಬಿಲ್ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದಾಗ ದಾಳಿ ನಡೆದಿದೆ. ಘಡನೆಯಲ್ಲಿ ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಎಂಜಿನಿಯರ್ ಕೈವಾಡ ಇರಬಹುದು ಎಂಬ ಶಂಕೆಯನ್ನು ಎ.ಸಿ.ಬಿ ವ್ಯಕ್ತಪಡಿಸಿದ್ದು, ಅವರನ್ನೂ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ. ಡಿ.ವೈ.ಎ.ಸ್ಪಿ ವೀರೇಶ ನೇತೃತ್ವದಲ್ಲಿ ದಾಳಿ ನಡೆದಿದೆ.

Be the first to comment

Leave a Reply

Your email address will not be published.


*