ಜಿಲ್ಲಾ ಸುದ್ದಿಗಳು
ಶಿರಸಿ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು 2021-22ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಸೇವಾಸಿಂಧು ಆನಲೈನ್ ಪೋರ್ಟಲ್ ಮುಖಾಂತರ ಅರ್ಜಿ ಆಹ್ವಾನಿಸಿದ್ದು ಬಸ್ ನಿಲ್ದಾಣಗಳ ಪಾಸ್ ಕೌಂಟರ್‍ಗಳಲ್ಲಿ ಸಪ್ಟೆಂಬರ್ 1 ರಿಂದ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿಯನ್ನು ಸೇವಾ ಸಿಂಧು ಆನ್‍ಲೈನ್ ಪೋರ್ಟಲ್ sevasindhu.karnataka.gov.in ಮುಖಾಂತರ ಸಲ್ಲಿಸಬಹುದಾಗಿದ್ದು, ಉತ್ತರ ಕನ್ನಡ ವಿಭಾಗ ವ್ಯಾಪ್ತಿಯಲ್ಲಿ ಬರುವ ಶಿರಸಿ, ಕುಮಟಾ, ಕಾರವಾರ, ಭಟ್ಕಳ, ಅಂಕೋಲಾ ಹಾಗೂ ಯಲ್ಲಾಪುರ ಘಟಕಗಳಲ್ಲಿ ವಿದ್ಯಾರ್ಥಿ ರಿಯಾಯತಿ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
7 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಹತ್ತು ತಿಂಗಳ ಅವಧಿಗೆ 150 ರೂ, ಹೈಸ್ಕೂಲ್ ವಿದ್ಯಾರ್ಥಿಗಳಿಗೆ 750 ರೂ, ಹೈಸ್ಕೂಲ ವಿದ್ಯಾರ್ಥಿನಿಯರಿಗೆ 550 ರೂ, ಪಿಯುಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 1050 ರೂ, ಹಾಗೂ ಸಂಜೆ ಕಾಲೇಜು, ಪಿಎಚ್‍ಡಿ ವಿದ್ಯಾರ್ಥಿಗಳಿಗೆ 1350 ರೂ, ವೃತ್ತಿಪರ ವಿದ್ಯಾರ್ಥಿಗಳಿಗೆ 1550 ರೂ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 150 ರೂ ಪಾಸ್ ದರ ನಿಗಧಿ ಪಡಿಸಲಾಗಿದೆ.
ಐ.ಟಿ.ಐ ವಿದ್ಯಾರ್ಥಿಗಳಿಗೆ 12 ತಿಂಗಳಿಗೆ ಅವಧಿಗೆ 1310 ರೂ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 160 ರೂ ಪಾಸ್ ದರ ನಿಗಧಿ ಪಡಿಸಲಾಗಿದೆ.ಶಾಲಾ ಕಾಲೇಜಿನ ಶಿಕ್ಷಣ ಸಂಸ್ಥೆಗಳು ದಾಖಲಾತಿಗಳು ಕಡ್ಡಾಯವಾಗಿದ್ದು, ಪಡಿತರ ಚೀಟಿ, ಆಧಾರ ಕಾರ್ಡ, ಚುನಾವಣಾ ಕಾರ್ಡ್, ವಿದ್ಯಾಸಂಸ್ಥೆಗೆ ಶುಲ್ಕ ಪಾವತಿಸಿರುವ ರಸಿದಿ, ಸ್ಟಾಪ್ ಸೈಜಿನ 3 ಪೋಟೊ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರ ಅವಶ್ಯಕವಾಗಿರುತ್ತದೆ. ಜಿಲ್ಲೆಯ ವಿದ್ಯಾರ್ಥಿಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಾ ಕ ರ ಸಾ ಸಂಸ್ಥೆ ಯ ಶಿರಸಿ ವಿಭಾಗೀಯ ನಿಯಂತ್ರಣಾ ಅಧಿಕಾರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
Be the first to comment