ರಾಜ್ಯ ಸುದ್ದಿಗಳು
ದೇವನಹಳ್ಳಿ
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಸರ್ವ ಜನರು ಸುಖವಾಗಿದ್ದರು. ಯಾವುದೇ ಕಷ್ಟಗಳು ಬಂದೊದಗಿರಲಿಲ್ಲ. ಭ್ರಷ್ಟ ಬಿಜೆಪಿ ಸರಕಾರ ಬಂದ ನಂತರ ಜನರ ಕಷ್ಟಗಳು ದಿನೇ ದಿನೇ ಹೆಚ್ಚುತ್ತಲೇ ಇದೆ ಎಂದು ಜಿಪಂ ಮಾಜಿ ಸದಸ್ಯ ಕೆ.ಸಿ.ಮಂಜುನಾಥ್ ತಿಳಿಸಿದರು.
ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಜಿ.ಮಂಜುನಾಥ್ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು. ಜನರಿಗೆ ಈಗಾಗಲೇ ಅರಿವಾಗಿದೆ. ಯಾವ ಪಕ್ಷದಲ್ಲಿ ನೆಮ್ಮದಿಯಿಂದ ಬದುಕು ನಡೆಸಬಹುದು ಎಂಬುವುದರ ಪರಿಕಲ್ಪನೆ ಸಿಕ್ಕಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ಜನಪರ ಕಾರ್ಯಗಳನ್ನು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಮಾಡಿರುವುದು ತಮಗೆಲ್ಲ ತಿಳಿದಿರುವ ವಿಷಯ. ಕೇವಲ ಕಾರ್ಪೋರೇಟರ್‌ಗಳ ಕೈಗೊಂಬೆಯಾಗಿರುವ ಬಿಜೆಪಿ ಮುಖಂಡರು ಜನರ ಕಷ್ಟಗಳಿಗೆ ಸ್ಪಂಧಿಸುವುದು ದೂರದ ಮಾತಾಗಿದೆ. ಈಗಾಗಲೇ ಪೆಟ್ರೋಲ್, ಡಿಸೇಲ್, ಗ್ಯಾಸ್ ಸೇರಿದಂತೆ ಹಲವು ಅಗತ್ಯ ವಸ್ತುಗಳ ಬೆಲೆ ಏರಿಸಿ ಗಾಯದ ಮೇಲೆ ಬರೆ ಎಳೆದಿದ್ದಾರೆ. ಇಂತಹ ಸರಕಾರವನ್ನು ಬೇರು ಸಮೇತ ಕಿತ್ತೊಗೆಯಬೇಕು ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಜಿ.ಮಂಜುನಾಥ್ ಮಾತನಾಡಿ, ಮುಂಬರುವ ಜಿಪಂ, ತಾಪಂ ಚುನಾವಣೆಗೆ ಈಗಿನಿಂದಲೇ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಮುಂಬರುವ ಚುನಾವಣೆಗಳಲ್ಲಿ ನಮ್ಮ ಪಕ್ಷದ ಯಾರೇ ಅಭ್ಯರ್ಥಿಯಾದರೂ ಗೆಲ್ಲಿಸಿಕೊಳ್ಳುವುದೊಂದೆ ಗುರಿಯಾಗಿರುತ್ತದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಈಗಿನಿಂದಲೇ ಕೆಲಸ ಪ್ರಾರಂಭಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷದವರೇ ಶಾಸಕರಾಗುತ್ತಾರೆ. ಜತೆಗೆ ಜಿಪಂ, ತಾಪಂ ಕ್ಷೇತ್ರಗಳಲ್ಲಿ ಹೆಚ್ಚು ಬಹುಮತ ಪಡೆದುಕೊಂಡು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಭವಿಷ್ಯ ನುಡಿದರು.ಈ ವೇಳೆಯಲ್ಲಿ ಕನ್ನಮಂಗಲ ಗ್ರಾಪಂ ಅಧ್ಯಕ್ಷ ಕೆ.ಆರ್.ನಾಗೇಶ್, ಸದಸ್ಯರಾದ ಲಕ್ಷೀಕಾಂತ್, ನರಸಿಂಹಮೂರ್ತಿ, ಅಂಬರೀಶ್, ನಂದಿನಿ ತ್ಯಾಗರಾಜ್, ಮಾಜಿ ಉಪಾಧ್ಯಕ್ಷೆ ಸರಸ್ಪತಿ ಮಂಜುನಾಥ್, ಮುಖಂಡ ಅರುಣ್, ಇತರರು ಇದ್ದರು.
Be the first to comment