ಬೆಲೆ ಏರಿಕೆ ವಿರೋಧಿಸಿ ಪಟ್ಟಣದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ವರದಿ-ಸುಚಿತ್ರಾ ನಾಯ್ಕ ಹೊನ್ನಾವರ

ಜಿಲ್ಲಾ ಸುದ್ದಿಗಳು 

ಹೊನ್ನಾವರ

ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಶರಾವತಿ ಸರ್ಕಲ್ ಬಳಿ ಬುಧವಾರ ಅಡುಗೆ ಅನಿಲ ಹಾಗು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಗ್ಯಾಸ್ ಸಿಲಿಂಡರ್ ಇಟ್ಟು, ಕಣ್ಣಿಗೆ ಕಪ್ಪು ಬಟ್ಟೆ ಧರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಪಟ್ಟಣದ ಶರಾವತಿ ಸರ್ಕಲ್ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಸಾಮಾನ್ಯರಿಗೆ ಸಂಕಷ್ಟ ನೀಡುತ್ತಿದೆ ಕೊರೊನಾ ಸಂಕಷ್ಟದ ನಡುವೆ ಬೆಲೆ ಏರಿಕೆಯ ಬಿಸಿ ನೀಡುತ್ತಿದೆ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

CHETAN KENDULI

ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಶರಾವತಿ ಸರ್ಕಲ್ ನಿಂದ ಕಾಲಿ ಸಿಲಿಂಡರ್ ಹೊತ್ತು ಮಿನಿ ವಿಧಾನಸೌಧದವರೆಗೆ ಮೆರವಣಿಗೆ ನಡೆಸಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ತಹಶೀಲ್ದಾರ್ ರ ಅನುಪಸ್ಥಿತಿಯಲ್ಲಿ ಚುನಾವಣಾ ವಿಭಾಗದ ಶಿರಸ್ತೇದಾರ ಮಹೇಶ ನಾಯ್ಕ ಮನವಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಜಾತಾ ಗಾಂವಕರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪುಷ್ಪಾ ನಾಯ್ಕ, ಸಿಂಧು ನಾಯ್ಕ, ಮಂಕಿ ಮಹಿಳಾ ಬ್ಲಾಕ್ ಅಧ್ಯಕ್ಷೆ ಉಷಾ ನಾಯ್ಕ, ಹೊನ್ನಾವರ ಮಹಿಳಾ ಬ್ಲಾಕ್ ಅಧ್ಯಕ್ಷೆ ಪುಷ್ಪಾ ಮಹೇಶ, ಭಟ್ಕಳ ಮಹಿಳಾ ಬ್ಲಾಕ್ ಅಧ್ಯಕ್ಷೆ ಜಯಲಕ್ಷ್ಮಿ ಗೊಂಡಾ, ಕುಮಟಾ ಮಹಿಳಾ ಬ್ಲಾಕ್ ಅಧ್ಯಕ್ಷೆ ಸುರೇಖಾ ವಾಲೇಕರ್, ಗೌರಿ ಅಂಬಿಕ, ಗೀತಾ ಬಂಡಾರ್ಕರ್, ಮಮತಾ ನಾಯ್ಕ, ವೀಣಾ ನಾಯ್ಕ, ವಿಜಯಾ ನಾಯ್ಕ ಇತರರು ಪಾಲ್ಗೊಂಡಿದ್ದರು.

Be the first to comment

Leave a Reply

Your email address will not be published.


*