ಜಿಲ್ಲಾ ಸುದ್ದಿಗಳು
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ತಿಂಗಳು ಸುರಿದ ಅತೀವ ಮಳೆಯಿಂದಾಗಿ ಅಣಶಿ ಗುಡ್ಡ ಕುಸಿದು ಕಾರವಾರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕನ್ನು ಸಂಪರ್ಕಿಸುವ ರಸ್ತೆ ಸಂಪೂರ್ಣ ಸ್ಥಗಿತಗೊಂಡು, ಜನ ಸಂಚಾರಕ್ಕೆ ಕಷ್ಟಕರವಾಗಿದೆ.
ಈ ಸಮಸ್ಯೆಯ ಪರಿಹಾರಕ್ಕಾಗಿ ಕಾರ್ಮಿಕ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ್ ಅವರ ಸೂಚನೆಯಂತೆ ಜಿಲ್ಲಾಡಳಿತವು ಸ್ಥಳೀಯರ ಸಹಕಾರದೊಂದಿಗೆ ಪರ್ಯಾಯ ರಸ್ತೆಯನ್ನು ನಿರ್ಮಾಣ ಮಾಡಿ ಲಘು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಈ ಭಾಗದ ಸಾರ್ವಜನಿಕರಿಗೆ ಕಾರವಾರದ ಆಸ್ಪತ್ರೆಗೆ ಹಾಗೂ ಜಿಲ್ಲಾ ಕೇಂದ್ರಕ್ಕೆ ತೆರಳುವುದಕ್ಕೆ ಯಾವುದೇ ಬಸ್ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದರು, ಹೆಬ್ಬಾರರು ಸ್ಥಳೀಯ ಸಮಸ್ಯೆಯನ್ನು ಮನಗಂಡು ಸಾರ್ವಜನಿಕರಿಗೆ ಉಂಟಾದ ಸಮಸ್ಯೆಗೆ ಪ್ರತಿಸ್ಪಂದಿಸಿ ಬಸ್ ಸಂಚಾರಕ್ಕೆ ಸಂಬಂಧಿಸಿದಂತೆ ಇಂದು ತುರ್ತಾಗಿ ಜಿಲ್ಲಾಡಳಿತ, ಲೋಕೋಪಯೋಗಿ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸಭೆ ನಡೆಸುವಂತೆ ಸೂಚಿಸಿದರು ಅದರಂತೆ ಸಭೆಯಲ್ಲಿ ಅಧಿಕಾರಿಗಳು ಸಚಿವರ ಮಾರ್ಗದರ್ಶನದಂತೆ ” ಮಿನಿ ಬಸ್ ” ಗಳ ಸಂಚಾರಕ್ಕೆ ಅನುಮತಿ ನೀಡುವಂತೆ ತೀರ್ಮಾನಿಸಲಾಗಿದೆ.ಇಂದಿನಿಂದ ಮಿನಿ ಬಸ್ ಸೇವೆ ಆರಂಭವಾಗಿದ್ದು, ಸ್ಥಳೀಯರಿಗೆ ಅನುಕೂಲಕರವಾಗಿದೆ.
Be the first to comment