ಜಿಲ್ಲಾ ಸುದ್ದಿಗಳು
ಹಳಿಯಾಳ
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದಲ್ಲಿ ಕಾರ್ಮಿಕರಿಗಾಗಿ ಇ-ಶ್ರಮ್ ಪೋರ್ಟ್ ಆರಂಭಿಸುವುದಾಗಿ ಕಾರ್ಮಿಕ ಸಚಿವರು ಮಾಹಿತಿ ನೀಡಿದ್ದಾರೆ. ಹಳಿಯಾಳ ಪಟ್ಟಣದ ಗಣೇಶ ಕಲ್ಯಾಣ ಮಂಟಪದಲ್ಲಿ ರಾಜ್ಯ ಅಸಂಘಟಿತ ಕಾರ್ಮಿಕ ಒಕ್ಕೂಟದ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾದ ಕಾರ್ಮಿಕ ಹಾಗು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ್ ಹೆಬ್ಬಾರ್ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ನೀಡಲಾಗುತ್ತಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡುವುದಲ್ಲದೇ ಅಸಂಘಟಿತ ಕಾರ್ಮಿಕರ ಸಾಮಾಜಿಕ, ಆರ್ಥಿಕ ಭದ್ರತೆಗಾಗಿ ಯೋಜನೆಗಳನ್ನು ರೂಪಿಸಲ ಇ- ಶ್ರಮ್ ಪೋರ್ಟ್ ನ್ನು ಪ್ರಾರಂಭವಾಗಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಇನ್ಕಮ್ ಟ್ಯಾಕ್ಸ್, ಇ ಎಸ್ ಐ, ಪಿ ಎಪ್, ಪಡೆಯುವ ಕಾರ್ಮಿಕರನ್ನು ಬಿಟ್ಟು ಉಳಿದೆಲ್ಲ ಕಾರ್ಮಿಕರನ್ನು ಅಸಂಘಟಿತ ಕಾರ್ಮಿಕರೆಂದು ಘೋಷಣೆ ಮಾಡಲಾಗುವುದು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ರಾಜ್ಯ ಅಸಂಘಟಿತ ಕಾರ್ಮಿಕ ಒಕ್ಕೂಟದ ಅಧ್ಯಕ್ಷ ಉಪೇಂದ್ರ, ಒಕ್ಕೂಟದ ಪದಾಧಿಕಾರಿಗಳು ಪ್ರಮುಖರಾದ ಮಂಗೇಶ್ ದೇಶಪಾಂಡೆ, ಯಲ್ಲಪ್ಪ ಹೊನ್ನೂಜಿ ಪ್ರಮುಖರು ಉಪಸ್ತಿತರಿದ್ದರು.
Be the first to comment