ಅತ್ಯಾಚಾರ ಪ್ರಕರಣಗಳು ದೇಶಕ್ಕೆ ಒಂದು ಕಪ್ಪು ಚುಕ್ಕಿಯಾಗಿದೆ: ಅಬ್ದುಲ್ ರಕೀಬ್

ವರದಿ-ಕುಮಾರ್ ನಾಯ್ಕ.ಭಟ್ಕಳ

ಜಿಲ್ಲಾ ಸುದ್ದಿಗಳು 

ಭಟ್ಕಳ

ದೆಹಲಿಯಲ್ಲಿ ನಾಗರಿಕ ರಕ್ಷಣಾ ಅಧಿಕಾರಿಯಾದ ರಬಿಯಾ ಸೈಫಿ ಎನ್ನುವ ಮಹಿಳೆಯನ್ನು ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರವೆಸಗಿ ಕ್ರೂರವಾಗಿ ಹತ್ಯೆ ಮಾಡಲಾಗಿದ ಪ್ರಕರಣವನ್ನು ಸ್ವತಂತ್ರ ಸಂಸ್ಥೆಯಿಂದ ತನಿಖೆಗೆ ಒಳಪಡಿಸಬೇಕು ಎಂದು ಇಲ್ಲಿನ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆ ಸಹಾಯಕ ಆಯುಕ್ತರ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿದೆ.

CHETAN KENDULI

ಈ ಸಂದರ್ಭದಲ್ಲಿ ಮಾತನಾಡಿದ ತಂಝೀಮ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಕೀಬ್ ಎಂ.ಜೆ, ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಘೋಷಣೆಯನ್ನು ಕೂಗುವ ದೇಶದಲ್ಲಿ ಮಹಿಳೆಯರಿಗೆ, ಯುವತಿಯರಿಗೆ ರಕ್ಷಣೆ ಇಲ್ಲವಾಗಿದೆ. ರಾಬಿಯಾ ಸೈಫಿ ಪ್ರಕರಣ ಸೇರಿದಂತೆ ದೇಶದಲ್ಲಿ ನಡೆದ ಮತ್ತು ನಡೆಯುತ್ತಿರುವ ಎಲ್ಲ ರೀತಿಯ ಮಹಿಳಾ ಅತ್ಯಾಚಾರ ಪ್ರಕರಣಗಳು ದೇಶಕ್ಕೆ ಒಂದು ಕಪ್ಪು ಚುಕ್ಕಿಯಾಗಿದೆ ಎಂದರು.


ತಂಝೀಮ್ ಉಪಾಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮಾತನಾಡಿ ರಕ್ಷಣಾ ಅಧಿಕಾರಿ ರಾಬಿಯಾರಿಗೆ ರಕ್ಷಣೆ ಸಿಗದೆ ಇದ್ದಾಗ ಇಲ್ಲಿನ ಸಾಮಾನ್ಯ ಮಹಿಳೆಯರ ಪಾಡೇನಾಗಬೇಕು. ದೇಶದ ರಕ್ಷಕರು ಎಲ್ಲಿದ್ದಾರೆ ಎನ್ನುವ ಪ್ರಶ್ನೆಯನ್ನು ಕೇಳುವಂತೆ ಮಾಡಿರುವ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು. ಈ ಬರ್ಬರ ಹತ್ಯೆಯ ಹಿಂದಿನ ನಿಜವಾದ ಅಪರಾಧಿಗಳನ್ನು ಆದಷ್ಟು ಬೇಗನೆ ಶಿಕ್ಷಿಸಬೇಕು ಮತ್ತು ಈ ಕೃತ್ಯದ ಹಿಂದೆ ಇರುವವರನ್ನು ಬಹಿರಂಗ ಗೊಳಿಸಬೇಕೆಂದು ಹೇಳಿದರು.

Be the first to comment

Leave a Reply

Your email address will not be published.


*